ನವದೆಹಲಿ: ಆಹಾರ ಭದ್ರತಾ ಕಾಯ್ದೆಯಡಿ ಆಹಾರ ಒದಗಿಸುವ ವಿಷಯದ ವಿಚಾರಣೆಯ ಸಂದರ್ಭದಲ್ಲಿ ಬಡವರಿಗೆ ಉಚಿತ ಪಡಿತರವನ್ನು (free ration) ನೀಡುವ ಬದಲು ಹೆಚ್ಚು ಉದ್ಯೋಗ ಸೃಷ್ಟಿ ಮಾಡುವಂತೆ ಸುಪ್ರೀಂ ಕೋರ್ಟ್ (Supreme Court) ಕೇಂದ್ರಕ್ಕೆ ಸೂಚನೆ ನೀಡಿದೆ (Central government) ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.
ಉಚಿತ ಆಹಾರ ಧಾನ್ಯಗಳನ್ನು ನೀಡುವುದು ಶಾಶ್ವತ ಪರಿಹಾರವಲ್ಲ, ಉದ್ಯೋಗ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಖಡಕ್ ಆಗಿ ಹೇಳಿದೆ. ಕೋವಿಡ್ನಿಂದಾಗಿ ಹಲವು ಜನರು ಉದ್ಯೋಗ ಕಳೆದು ಕೊಂಡಿದ್ದಾರೆ. ಅವರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವಲಸೆ ಕಾರ್ಮಿಕರ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಯನ್ನು ಪ್ರಾರಂಭಿಸಿದೆ.
ಸೋಮವಾರ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಮನಮೋಹನ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಎನ್ಜಿಒ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಸರ್ಕಾರದ ನೆರವಿನ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ಅಗತ್ಯವಿರುವವರಿಗೆ ಪಡಿತರ ಚೀಟಿ ವಿತರಿಸಬೇಕು ಎಂದರು. ಈ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ ಸರ್ಕಾರವು 80 ಕೋಟಿ ಬಡವರಿಗೆ ಗೋಧಿ ಮತ್ತು ಅಕ್ಕಿಯ ರೂಪದಲ್ಲಿ ಉಚಿತ ಪಡಿತರವನ್ನು 80 ಕೋಟಿ ಬಡವರಿಗೆ ಒದಗಿಸುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಈ ಕುರಿತು ಮಾತನಾಡಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಈ ಉಚಿತ ವಸ್ತುಗಳನ್ನು ಎಷ್ಟು ದಿನ ನೀಡಬಹುದು? ನಾವು ಶಾಶ್ವತ ಪರಿಹಾರದ ಬಗ್ಗೆ ಯೋಚಿಸಬೇಕಾಗಿದೆ. ಇದೀಗ ತೆರಿಗೆ ಪಾವತಿಸುವವರು ಮಾತ್ರ ಉಚಿತ ಆಹಾರ ಧಾನ್ಯಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೆಚ್ಚಿನ ಪಡಿತರ ಚೀಟಿಗಳನ್ನು ನೀಡಲು ನಾವು ರಾಜ್ಯಗಳ ಮೇಲೆ ಒತ್ತಡ ಹೇರಿದರೆ, ಅಂತಿಮವಾಗಿ ಅದು ಕೇಂದ್ರ ಸರ್ಕಾರದ ಮೇಲೆ ಹೊರೆ ಬೀಳುತ್ತದೆ ಅದಕ್ಕಾಗಿ ನಾವು ಪರ್ಯಾಯ ಮಾರ್ಗವನ್ನು ಕಂಡು ಕೊಳ್ಳಬೇಕಾಗಿದೆ. ಹೆಚ್ಚು ಉದ್ಯೋಗ ಸೃಷ್ಟಿಸಬೇಕಾಗಿದೆ ಎಂದು ಅವರು ಹೇಳಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 8 ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಈ ಸುದ್ದಿಯನ್ನೂ ಓದಿ : Farmers Protest: ರೈತರ ಪ್ರತಿಭಟನೆ; ರಸ್ತೆ ತೆರವಿಗೆ ಕೋರಿ ಅರ್ಜಿ ಸಲ್ಲಿಕೆ- ಸುಪ್ರೀಂ ಕೋರ್ಟ್ ಫುಲ್ ಗರಂ