ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ, ಬೆಳಗಾವಿಯ ಸುವರ್ಣ ಸೌಧದ ಎದುರು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಇಂದು ನಡೆಯುತ್ತಿರುವ ಪಂಚಮಸಾಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಭಾಗವಹಿಸಿದ್ದರು.
ಬೆಳಗಾವಿಯ ಸುವರ್ಣ ಸೌಧದ ಎದುರು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಪಾಲ್ಗೊಂಡು ಮಾತನಾಡಿದರು.
ಈ ಸುದ್ದಿಯನ್ನೂ ಓದಿ | Job Guide: ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್‌ನ 118 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಮಾಜಿ ಸಚಿವ ಸಿ.ಸಿ. ಪಾಟೀಲ್, ಶಾಸಕರಾದ ಬಸವರಾಜ್ ಮತ್ತಿಮಡು, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ ಮತ್ತು ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.