Happy Birthday Yuvraj Singh: ಭಾರತೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿರುವ ಯುವರಾಜ್ ಸಿಂಗ್ ಗುರುವಾರ ತಮ್ಮ 43ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಸಿಕ್ಸರ್ ಕಿಂಗ್ ಜನುಮ ದಿನಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದ್ದಾರೆ.
2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ತಂಡ ಪ್ರಶಸ್ತಿ ಗೆಲುವಿನಲ್ಲಿ ಯುವಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು ಹಾಗೂ ಟೂರ್ನಿ ಶ್ರೇಷ್ಠ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅಲ್ಲದೆ 2007ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್‌ನ ವೇಗಿ ಸ್ಟುವರ್ಟ್ ಬ್ರಾಡ್‌ಗೆ ಓವರ್‌ನಲ್ಲಿ 6 ಸಿಕ್ಸರ್ ಸಿಡಿಸಿ ಯುವರಾಜ್ ಸಿಂಗ್ ವಿಶ್ವ ದಾಖಲೆ ಬರೆದಿದ್ದರು.
ಯುವರಾಜ್ ಸಿಂಗ್‌ಗೆ ಪ್ರಮುಖ 10 ದಾಖಲೆಗಳು
- ಅತ್ಯಂತ ವೇಗದ ಟಿ20ಐ ಅರ್ಧಶತಕ
2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧಶತಕವನ್ನು ಸಿಡಿಸಿದ್ದರು. ಆ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ಯುವಿ ಬರೆದಿದ್ದರು. ಸ್ಟುವರ್ಟ್ ಬ್ರಾಡ್ ಅವರ ಒಂದೇ ಓವರ್‌ನಲ್ಲಿ ಯುವರಾಜ್ ಸಿಂಗ್ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು.
2. ಏಕೈಕ ಓವರ್‌ನಲ್ಲಿ ಆರು ಸಿಕ್ಸರ್
ಕ್ರಿಕೆಟ್ ಇತಿಹಾಸದಲ್ಲಿ ಏಕೈಕ ಓವರ್‌ನಲ್ಲಿ ಆರು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೂಡ ಯುವರಾಜ್ ಸಿಂಗ್ ಅವರ ಹೆಸರಿನಲ್ಲಿದೆ. 2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇವರು ಆರು ಸಿಕ್ಸರ್ ಬಾರಿಸಿದ್ದರು. ಸ್ಟುವರ್ಟ್ ಬ್ರಾಡ್‌ಗೆ ಯುವಿ ಸಿಕ್ಸರ್ ಸಿಡಿಸಿದ್ದರು.
3.ಟೂರ್ನಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಸಿಕ್ಸರ್ ಕಿಂಗ್
2011ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಅದ್ಭುತ ಆಲ್‌ರೌಂಡರ್ ಪ್ರದರ್ಶನವನ್ನು ತೋರಿದ್ದರು. ಅವರು 362 ರನ್‌ಗಳು ಹಾಗೂ 15 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ ಟೂರ್ನಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು.
4️⃣0️⃣2️⃣ international games 👌
— BCCI (@BCCI) December 12, 2024
1️⃣1️⃣7️⃣7️⃣8️⃣ international runs 💪
1️⃣4️⃣8️⃣ international wickets 👍
2007 ICC World T20 & 2011 ICC World Cup-winner 🏆 🏆
Birthday wishes to the legendary Yuvraj Singh! 👏 🎂#TeamIndia | @YUVSTRONG12 pic.twitter.com/zO6DjBiK5U
4. ಏಕೈಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ
2011ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ನಾಲ್ಕು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಆ ಮೂಲಕ ಶ್ರೀಲಂಕಾ ದಿಗ್ಗಜ ಅರವಿಂದ ಡಿ ಸಿಲ್ವಾ ಹಾಗೂ ಲ್ಯಾನ್ಸ್ ಕ್ಲಸ್ನರ್ ಅವರೊಂದಿಗೆ ಜಂಟಿ ದಾಖಲೆಗೆ ಭಾಜನರಾದರು.
5. ವಿಕೆಟ್ ಹಾಗೂ ಅರ್ಧಶತಕದ ದಾಖಲೆ
2011ರ ಏಕದಿನ ವಿಶ್ವಕಪ್ ಟೂರ್ನಿಯ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ ಐದು ವಿಕೆಟ್ ಸಾಧನೆಯ ಜೊತೆಗೆ ಅರ್ಧಶತಕವನ್ನು ಸಿಡಿಸಿದ್ದರು. ಈ ಸಾಧನೆ ಮಾಡಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ಯುವಿ ಬರೆದಿದ್ದಾರೆ.
6. ಕಿರಿಯ-ಹಿರಿಯ ವಿಶ್ವಕಪ್‌ನಲ್ಲಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗಳು
2000ರ ಅಂಡರ್ 19 ವಿಶ್ವಕಪ್ ಟೂರ್ನಯಲ್ಲಿ ಹಾಗೂ 2011ರ ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಯುವರಾಜ್ ಸಿಂಗ್ ಟೂರ್ನಿ ಶ್ರೇಷ್ಠ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ದಾಖಲೆ ಯುವಿ ಹೆಸರಿನಲ್ಲಿದೆ.
7. ಅತ್ಯಂತ ದುಬಾರಿ ಐಪಿಎಲ್ ಆಟಗಾರ
2015ರಲ್ಲಿ ಯುವರಾಜ್ ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದರು. ಇವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 15 ಕೋಟಿ ರೂ. ಗಳಿಗೆ ಖರೀದಿಸಿತ್ತು.
8. ಐಪಿಎಲ್ ಟೂರ್ನಿಯಲ್ಲಿ ಎರಡು ಹ್ಯಾಟ್ರಿಕ್
ಏಕೈಕ ಐಪಿಎಲ್ ಆವೃತ್ತಿಯಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ದಾಖಲೆ ಕೂಡ ಯುವರಾಜ್ ಸಿಂಗ್ ಅವರ ಹೆಸರಿನಲ್ಲಿದೆ. ಅವರು 2009ರ ಟೂರ್ನಿಯಲ್ಲಿ ಎರಡು ಬಾರಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.
9. ನಾಲ್ಕನೇ ವಿಕೆಟ್ ಅತಿ ಹೆಚ್ಚು ರನ್ ಜತೆಯಾಟದ ಜಂಟಿ ದಾಖಲೆ
2017ರಲ್ಲಿ ಇಂಗ್ಲೆಂಡ್ ವಿರುದ್ಧ ಎಂಎಸ್ ಧೋನಿ ಅವರೊಂದಿಗೆ ಯುವರಾಜ್ ಸಿಂಗ್ 256 ರನ್‌ಗಳ ಜತೆಯಾಟವನ್ನು ಆಡಿದ್ದರು. ಆ ಮೂಲಕ ಭಾರತ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು.
10. 300ಕ್ಕೂ ಹೆಚ್ಚು ರನ್ ಮತ್ತು 15 ವಿಕೆಟ್‌ಗಳು
ಏಕೈಕ ವಿಶ್ವಕಪ್ ಆವೃತಿಯಲ್ಲಿ 300ಕ್ಕೂ ಹೆಚ್ಚು ರನ್ ಹಾಗೂ 15 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ಯುವರಾಜ್ ಸಿಂಗ್ ಹೆಸರಿನಲ್ಲಿದೆ.
ಈ ಸುದ್ದಿಯನ್ನು ಓದಿ: IND vs AUS: ಮೂರನೇ ಟೆಸ್ಟ್ ಗೆಲ್ಲಲು ಭಾರತಕ್ಕೆ ಅಗತ್ಯ ಸಲಹೆ ನೀಡಿದ ಮ್ಯಾಥ್ಯೂ ಹೇಡನ್!