Thursday, 12th December 2024

House Arrest: ಇವನ್ಯಾವ ಸೀಮೆ ವೈದ್ಯ? ಪತ್ನಿಯನ್ನು ಗೃಹ ಬಂಧನದಲ್ಲಿರಿಸಿ ಚಿತ್ರಹಿಂಸೆ ಕೊಟ್ಟ ಪಾಪಿ ಗಂಡ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ(Chikmagaluru) ಮನ ಕಲುಕುವ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು(House Arrest) ಪತಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿರುವ ಘಟನೆ ತುಂಬಾ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹ ಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿರುವುದಾಗಿ ತಿಳಿದು ಬಂದಿದೆ.

ಚಿಕ್ಕಮಗಳೂರು ನಗರದ ದೋಣಿಕಣ(Donikana) ಬಡಾವಣೆಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆ ಚಿಕ್ಕಮಗಳೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರಿಗೆ ಈ ಸುದ್ದಿ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ಡಾ.ರವಿಕುಮಾರ್ (DR. Ravikumar) ನಾಪತ್ತೆಯಾಗಿದ್ದಾನೆ. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯನಾಗಿದ್ದು, ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ ಅವರನ್ನು ವಿವಾಹವಾಗಿದ್ದ. ನಂತರ ಇಬ್ಬರ ನಡುವೆ ಕೌಟುಂಬಿಕ ಕಲಹಗಳು ಉಂಟಾಗಿ ಇಬ್ಬರು ಬೇರೆಯಾಗಿದ್ದಾರೆ. ಒಂದು ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ(Divorce) ನೀಡಿದ್ದಾನೆ.

ವಿನುತಾ ರಾಣಿ ಮೂಲತಃ ಶಿವಮೊಗ್ಗದ ವಿನೋಬಾ ನಗರದವರು. ಗಂಡ ವಿಚ್ಛೇದನ ನೀಡಿ ಆಕೆಯನ್ನು ಮನೆಯಲ್ಲಿ ಕೂಡಿ ಹಾಕಿದ್ದಷ್ಟೇ ಅಲ್ಲದೆ, ಹುಚ್ಚಿ ಎಂದು ಬಿಂಬಿಸಿದ್ದಾನೆ ಎಂದು ವಿನುತಾ ರಾಣಿ ಅವರ ಮನೆಯವರು ಆರೋಪಿಸಿದ್ದಾರೆ. ಡಾ.ರವಿಕುಮಾರ್ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆಕೆಯ ಗಂಡ ಊಟದಲ್ಲಿ ಮತ್ತಿನ ಔಷಧ ನೀಡುತ್ತಿದ್ದ, ಜತೆಗೆ ಮನೆಯಲ್ಲೇ ಬಂಧಿಸಿ ಸಾಕಷ್ಟು ಚಿತ್ರಹಿಂಸೆ ನೀಡುತ್ತಿದ್ದ ಮತ್ತು ಆಕೆಯಿಂದ ಮಗನನ್ನೂ ದೂರ ಮಾಡಿದ್ದ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆಯ ಕುಟುಂಬದವರು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ರವಿಕುಮಾರ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ವಿನುತಾ ರಾಣಿ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಕುಟುಂಬ ಹಾಗೂ ಮಹಿಳೆಯ ಹೇಳಿಕೆ ಆಧಾರದ ಮೇಲೆ ದೂರು ದಾಖಲಿಸಿಕೊಂಡು ನಾಪತ್ತೆಯಾಗಿರುವ ಡಾ.ರವಿಕುಮಾರ್​​​ನ ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.

ಪ್ರಿಯಕರನೊಂದಿಗೆ ಹಾಸಿಗೆ ಮೇಲಿದ್ದ ಹೆಂಡತಿಯನ್ನು ಕೊಂದ ಗಂಡ

ಕಳೆದ ವಾರ ಉತ್ತರ ಪ್ರದೇಶದ ಜಲೌನ್‌ನಲ್ಲಿ ರಾತ್ರಿ ಮನೆಯಲ್ಲಿ ಹೆಂಡತಿ ಪರ ಪುರುಷನೊಂದಿಗೆ ಹಾಸಿಗೆಯಲ್ಲಿ ಒಟ್ಟಿಗೆ ಇದ್ದುದನ್ನು ಕಂಡ ಆಕೆಯ ಗಂಡ ತನ್ನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಂದಿದ್ದ. ವರದಿಗಳ ಪ್ರಕಾರ, ಕುನ್ವರ್ ಸಿಂಗ್ ಕೂಲಿ ಕೆಲಸ ಮಾಡುತ್ತಿದ್ದ. ಆತ ತನ್ನ ಹೆಂಡತಿ ಆರತಿ ಮತ್ತು ಅವರ ಇಬ್ಬರು ಚಿಕ್ಕ ಮಕ್ಕಳೊಂದಿಗೆ ವಾಸಿಸುತ್ತಿದ್ದ. ಕಳೆದ ಕೆಲವು ತಿಂಗಳುಗಳಿಂದ ಕುನ್ವರ್ ತನ್ನ ಹೆಂಡತಿಯ ಚಾರಿತ್ರ್ಯದ ಬಗ್ಗೆ ಅನುಮಾನ ಹೊಂದಿದ್ದನು. ಇದರಿಂದ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು.

ಆತನ ಹೆಂಡತಿ ಹತ್ತಿರದ ಹಳ್ಳಿಯ ನಿವಾಸಿ ಛವಿನಾಥ್ ಸಿಂಗ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಇದರ ಬಗ್ಗೆ ಕುನ್ವರ್​ಗೂ ಅನುಮಾನವಿತ್ತು. ತನ್ನ ಊರಿಗೆ ಹೋಗುತ್ತಿದ್ದ ಕುನ್ವರ್ ಸಿಂಗ್ ಮನೆಯಲ್ಲಿ ಇಲ್ಲದಿದ್ದಾಗ ಆತನ ಹೆಂಡತಿ ತನ್ನ ಪ್ರೇಮಿಯೊಂದಿಗೆ ಇರುತ್ತಿದ್ದಳು. ಈ ವಿಚಾರಕ್ಕೆ ಸುಮಾರು ಹತ್ತು ದಿನಗಳ ಮೊದಲು ಕುನ್ವರ್ ಮತ್ತು ಆರತಿ ತೀವ್ರ ವಾಗ್ವಾದ ನಡೆಸಿದ್ದರು. ಈ ಘರ್ಷಣೆಯ ಬಳಿಕ ಆರತಿ ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಳು. ಕುನ್ವರ್‌ಗಾಗಿ ಪೊಲೀಸರು ಹುಡುಕಾಡುತ್ತಿದ್ದರು. ಬಂಧನದ ಭೀತಿಯಿಂದ ಆತ ತಲೆಮರೆಸಿಕೊಂಡಿದ್ದ.

ಈ ಸುದ್ದಿಯನ್ನೂ ಓದಿ:AMU Row: ಬಾಂಗ್ಲಾದೇಶ ವಿದ್ಯಾರ್ಥಿಗಳಿಂದ ಹಿಂದೂ ವಿರೋಧಿ ಪೋಸ್ಟ್- AMUನಲ್ಲಿ ಭುಗಿಲೆದ್ದ ಆಕ್ರೋಶ