Friday, 13th December 2024

Prakash Raj: ನಾನು ಕಳ್‌ ನನ್ಮಕ್ಕಳ ಬಗ್ಗೆ ಮಾತಾಡಲ್ಲ; ದರ್ಶನ್​​​ ಬೇಲ್​​ ಬಗ್ಗೆ ಪ್ರಕಾಶ್​​ ರಾಜ್​​ ರಿಯಾಕ್ಷನ್!​​

Prakash Raj

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್‌ಗೆ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಮತ್ತೊಂದೆಡೆ ದರ್ಶನ್‌ (Darshan) ಬೇಲ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್‌ ರಾಜ್‌ (Prakash Raj), ನಾನು ಮಕ್ಕಳ ಬಗ್ಗೆ ಮಾತನಾಡುತ್ತೇನೆಯೇ ಹೊರತು, ಕಳ್ಳ ನನ್ಮಕ್ಕಳ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ದರ್ಶನ್ ಜಾಮೀನು ಬಗ್ಗೆ ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ನಟ ಪ್ರಕಾಶ್ ರಾಜ್, ನಾನು ಇಲ್ಲಿಗೆ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ನಾನು ಮಕ್ಕಳ ಬಗ್ಗೆ ಮಾತನಾಡುತ್ತೇನೆ ಹೊರತು ಕಳ್‌ ನನ್ಮಕ್ಕಳ ಮಕ್ಕಳ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ನಾನು ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಚೆನ್ನೈನಿಂದ ಮೈಸೂರಿಗೆ ಬಂದಿದ್ದೇನೆ. ನಾನು ಸಿನಿಮಾ ಹಾಗೂ ರಾಜಕೀಯದ ಬಗ್ಗೆ ಮಾತನಾಡಲ್ಲ, ನಾನು ನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ | Actor Darshan: ಫಲಿಸಿತು ಪೂಜಾ ಫಲ; ದರ್ಶನ್‌ಗೆ ಬೇಲ್ ಸಿಕ್ಕ ಹಿನ್ನೆಲೆ ಕಾಮಾಕ್ಯ ದೇವಾಲಯದ ಫೋಟೋ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮೀ

ದರ್ಶನ್‌ ಸೇರಿ 7 ಆರೋಪಿಗಳಿಗೆ ಜಾಮೀನು; ರೇಣುಕಾಸ್ವಾಮಿ ತಂದೆ ಮೊದಲ ಪ್ರತಿಕ್ರಿಯೆ ಏನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ 7 ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಶಿವನಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ವಿಷಯ ಗೊತ್ತಾಗಿದೆ. ಆದರೆ, ಅಂತಿಮವಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ನ್ಯಾಯಾಲಯದ ಮೇಲೆ ನಮಗೆ ಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ನಾವು ಸರ್ಕಾರವನ್ನು ಕೇಳುವುದು ಇಷ್ಟೇ, ಸೊಸೆಗೆ ಕಾಯಂ ಸರ್ಕಾರಿ ನೌಕರಿ ನೀಡಬೇಕು ಎಂದು ಮನವಿ ಮಾಡುತ್ತೇವೆ. ಎಲ್ಲರಿಗೂ ಜಾಮೀನು ಸಿಕ್ಕಿದೆ ಎಂದು ಗೊತ್ತಾಗಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಬೇಲ್‌ ಆಗಿರಬಹುದು. ಆದರೆ, ಅಂತಿಮವಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಹೇಳಿದ್ದಾರೆ.

ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ರಿಲೀಫ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 7 ಆರೋಪಿಗಳಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್​ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಜಾಮೀನು ಅರ್ಜಿಗಳ ಅರ್ಜಿಗಳ ವಿಚಾರಣೆಯನ್ನು ಡಿ.9ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ, ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟಿಸಿದೆ.

ಜೈಲಿನಲ್ಲಿದ್ದ ದರ್ಶನ್‌ಗೆ ಬೆನ್ನು ನೋವಿನ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಅ.30ರಂದು ಹೈಕೋರ್ಟ್‌ ಆರು ವಾರ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡರೂ ಶಸ್ತಚಿಕಿತ್ಸೆ ನಡೆದಿರಲಿಲ್ಲ. ರಕ್ತದೊತ್ತಡ ಹಿನ್ನೆಲೆಯಲ್ಲಿ ಪೂರಕ ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಮತ್ತಷ್ಟು ದಿನ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಬೇಕು ಎಂದು ವಕೀಲರು ಮನವಿ ಮಾಡಿದ್ದರು. ಇದರಿಂದ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ್ದ ಕೋರ್ಟ್‌, ಇದೀಗ ದರ್ಶನ್‌ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.