ಚಿಂಚೋಳಿ: ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಐನಾಪೂರ ಏತ ನೀರಾವರಿ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ, ಮುಲ್ಲಾಮಾರಿ ಏತ ನೀರಾವರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಾನಂದ ಮಾಲಿ ಪಾಟೀಲ ಅವರು ಚಿಂಚೋಳಿ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರಿಗೆ ಮನವಿ ಪತ್ರ (Kalaburagi News) ಸಲ್ಲಿಸಿದರು.
ರಾಜ್ಯ ಸರ್ಕಾರವು ಐನಾಪೂರ ಏತ ನಿರಾವರಿ ಯೋಜನೆಗೆ ಅಂದಾಜು 10.06 ಕೋಟಿ ರೂ. ಮೀಸಲು ಇಟ್ಟಿದ್ದು, ಅನುದಾನವನ್ನು ಬಿಡುಗಡೆಗೊಳಿಸಿ, ಯೋಜನೆಗೆ ಚಾಲನೆ ನೀಡಬೇಕು ಎಂದು ಅವರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Bengaluru News: ಬೆಂಗಳೂರಿನಲ್ಲಿ ಡಿ.15ರಂದು ಉಚಿತ ಧ್ಯಾನ ಕಲಿಕೆ ಕಾರ್ಯಕ್ರಮ
ಬಡ ರೈತರ ಬಹುದಿನಗಳ ಬೇಡಿಕೆಯ ಕನಸಾದ ಐನಾಪೂರ ಏತ ನೀರಾವರಿ ಯೋಜನೆಯು ಕಾಯಕಲ್ಪ ಘಟಕ್ಕೆ ಬಂದು ನಿಂತಿದ್ದು, ಸರ್ಕಾರವು ಅನುದಾನ ಬಿಡುಗಡೆಗೊಳಿಸಿ, ಬೇಸಿಗೆಯ ಪ್ರಾರಂಭದಲ್ಲಿಯೇ ಯೋಜನೆಗೆ ಅಡಿಗಲ್ಲು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.