ನವದೆಹಲಿ: ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (LK Advani) ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ಅನಾರೋಗ್ಯದಿಂದ ಇಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. 97 ವರ್ಷ ವಯಸ್ಸಿನ ಎಲ್‌ಕೆ ಅಡ್ವಾಣಿ ಅವರು ಕಳೆದ ಕೆಲ ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು (ಶುಕ್ರವಾರ ಡಿ.14) ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ ಕಾರಣ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಲ್‌ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಬಿಗಿಭದ್ರತೆ ನಿಯೋಜನೆ ಮಾಡಲಾಗಿದೆ. ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
NEWS | LK Advani Admitted To Apollo Hospital In Delhi: Reports
— GPlus (@guwahatiplus) December 14, 2024
Veteran BJP leader Lal Krishna Advani has been admitted to Apollo Hospital in Delhi on December 14, as per reports.
As per media reports, the 96-year-old leader’s condition is stable and he remains under… pic.twitter.com/QL4quB5mtq
ಭಾರತ ರತ್ನ ಪುರಸ್ಕೃತ ಅಡ್ವಾಣಿ ದೇಶದ ಹಿರಿಯ ನಾಯಕರಲ್ಲಿ ಗಣತಿಯಾಗಿದ್ದಾರೆ. ಅವರು ನವೆಂಬರ್ 8ರಂದು 97ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಡ್ವಾಣಿ 1927 ರಲ್ಲಿ ಕರಾಚಿಯಲ್ಲಿ (ಇಂದಿನ ಪಾಕಿಸ್ತಾನ) ಜನಿಸಿದ್ದರು. 2002ರಿಂದ 2004ರವರೆಗೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಉಪಪ್ರಧಾನಿಯಾಗಿದ್ದರು. ಅಡ್ವಾಣಿ ತಮ್ಮ ರಾಜಕೀಯ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸ್ವಯಂ ಸೇವಕರಾಗಿ ಪ್ರಾರಂಭಿಸಿದರು. 2015ರಲ್ಲಿ ಅಡ್ವಾಣಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು ನೀಡಲಾಗಿತ್ತು.
ಈ ಸುದ್ದಿಯನ್ನೂ ಓದಿ:LK Advani birthday: ದೇಶದ ಅಭಿವೃದ್ದಿಗೆ ಎಲ್‌ಕೆ ಅಡ್ವಾಣಿ ಕೊಡುಗೆ ಅಪಾರ-ನರೇಂದ್ರ ಮೋದಿ!