ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಾಲ್ಕು ರಸ್ತೆ ಸಾರಿಗೆ ನಿಗಮಗಳ ಸಂಘಟನೆ ನಿರ್ಧರಿಸಿವೆ.
ಬಸ್ ನಿಲ್ದಾಣಗಳಲ್ಲೇ ಬಸ್ಸಿಗಾಗಿ ಕಾದು ಕುಳಿತಿದ್ದಾರೆ. ಸರ್ಕಾರ ಮತ್ತು ಸಾರಿಗೆ ನೌಕರರ ಮಧ್ಯೆ ಪ್ರಯಾಣಿಕರ ನೋವನ್ನು ಕೇಳೋ ರಿಲ್ಲ ಎಂದು ಪ್ರಯಾಣಿಕರು ದೂರುತ್ತಿದ್ದಾರೆ.
ಬಿಎಂಟಿಸಿ ಬಸ್ ಇಲ್ಲದ ಕಾರಣ ಆಟೋ ಚಾಲಕರು ದಂಧೆಗಿಳಿದಿದ್ದಾರೆ, ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡು ತ್ತಿದ್ದಾರೆ. ಹೀಗಾಗಿ ಬ್ಯಾಟರಾಯನಪುರ ಪೊಲೀಸರು ವಾರ್ನಿಂಗ್ ಕೊಟ್ಟಿದ್ದು, ಹೆಚ್ಚು ಹಣ ವಸೂಲಿ ಮಾಡಿದರೆ ಪ್ರಕರಣ ದಾಖಲಿಸುವು ದಾಗಿ ಹೇಳಿದ್ದಾರೆ.
ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ನಿಗಮಗಳ ಬಸ್ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ನಾಲ್ಕು ನಿಗಮಗಳಿಂದ 1.30 ಲಕ್ಷ ನೌಕರರಿದ್ದು, ಅವರಲ್ಲಿ ಬಹುತೇಕರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.