Saturday, 23rd November 2024

ಸಂಜನಾ ಗಲ್ರಾನಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಡ್ರಗ್ಸ್ ಜಾಲ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ನೀಡಿದೆ.

ಜಾಮೀನು ಮಂಜೂರು ಮಾಡುವ ಸಂದರ್ಭ ನ್ಯಾಯಮೂರ್ತಿ ನಿವಾಸ್ ಹರೀಶ್ ಕುಮಾರ್ ಅವರು, ಷರತ್ತುಗಳನ್ನು ವಿಧಿಸಿ ತೀರ್ಪು ನೀಡಿದ್ದಾರೆ.

3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು, ‘ಪ್ರತಿ ತಿಂಗಳು ಎರಡು ಬಾರಿ ಠಾಣೆಗೆ ಹಾಜರಾಗ ಬೇಕು, ತನಿಖೆಗೆ ಸಹಕರಿಸಬೇಕು ಅಂತ ತಿಳಿಸಿದೆ. ತನಿಖೆಗೆ ಸಹಕಾರ ನೀಡಿ, ಸಾಕ್ಷ್ಯಗಳನ್ನು ತಿರುಚದಂತೆ ನಿರ್ದೇಶನ ನೀಡಲಾಗಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಲಾಗಿತ್ತು. ಆರೋಗ್ಯ ಸರಿ ಇರದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಜಾಮೀನು ನೀಡುವಂತೆ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿದ್ದ ಸಂಜನಾ ಗಲ್ರಾನಿ ಅವರ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿ, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.