Sunday, 5th January 2025

Karnataka Weather: ರಾಜ್ಯದಲ್ಲಿ ಡಿ.17ರಿಂದ ನಾಲ್ಕು ದಿನ ಮಳೆ ಸಾಧ್ಯತೆ

Karnataka Weather

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಡಿ.15 ಮತ್ತು 16ರಂದು ರಾಜ್ಯದಾದ್ಯಂತ ಒಣ ಹವೆ ಇರಲಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಡಿ.17ರಿಂದ ನಾಲ್ಕು ದಿನ ಮತ್ತೆ ಉತ್ತಮ ಮಳೆಯಾಗುವ (Karnataka Weather) ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಡಿ.17ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ,
ಚಾಮರಾಜನಗರ, ತುಮಕೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇನ್ನು ಡಿ.18ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ
ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಡಿ.19ರಂದು ಕರಾವಳಿಯ ಜಿಲ್ಲೆಗಳ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಡಿ. 20ರಂದು ಉಡುಪಿ, ದಕ್ಷಿಣ ಕನ್ನಡದ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು
ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಈ ಸುದ್ದಿಯನ್ನೂ ಓದಿ | WTC 2025 Final scenario: 3ನೇ ಟೆಸ್ಟ್‌ ಮಳೆಗೆ ಬಲಿಯಾದರೆ ಭಾರತ ಫೈನಲ್‌ಗೆ ತಲುಪುತ್ತಾ? ಇಲ್ಲಿದೆ ಲೆಕ್ಕಾಚಾರ!

ತಾಪಮಾನದ ಮುನ್ಸೂಚನೆ
ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಮಾನ 2°C ರಿಂದ 4°C ಇಳಿಕೆ, ನಂತರ ಹೆಚ್ಚು ಬದಲಾವಣೆಯಾಗುವುದಿಲ್ಲ. ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನಗಳಲ್ಲಿ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಮಾನ 2 °C ಇಳಿಕೆ, ನಂತರ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳ.

ಡಿ.16ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ಇಬ್ಬನಿ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 °C ಮತ್ತು 18 ° C ಆಗಿರಬಹುದು.

ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ಇಬ್ಬನಿ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 °C ಮತ್ತು 18°c ಆಗಿರಬಹುದು.