Saturday, 14th December 2024

Gruha Lakshmi Scheme: ಗೃಹಲಕ್ಷ್ಮಿ ಹಣದಿಂದ ಬೋರ್‌ವೆಲ್ ಕೊರೆಸಿದ ಅತ್ತೆ-ಸೊಸೆ; ಡಿಸಿಎಂ ಡಿಕೆಶಿ ಮೆಚ್ಚುಗೆ

Gruha Lakshmi Scheme

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್‌ವೆಲ್‌ ಕೊರೆಸಿದ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ-ಸೊಸೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆಯಾಗಿದೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಅವರು ಪ್ರತಿ ತಿಂಗಳು ತಮಗೆ ಬರುತ್ತಿದ್ದ ಗೃಹ ಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು, ಸುಮಾರು 44 ಸಾವಿರ ರೂ.ಗಳನ್ನು ಬಳಸಿಕೊಂಡು ಬೋರ್‌ವೆಲ್‌ ಕರೆಸಿದ್ದರು. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Mahamastakabhisheka: ಗೊಮ್ಮಟಗಿರಿಯ ಬಾಹುಬಲಿಗೆ ವಿಜೃಂಭಣೆಯ ಮಹಾಮಸ್ತಕಾಭಿಷೇಕ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ಗೃಹಲಕ್ಷ್ಮಿಗೆ ಒಲಿದ ಗಂಗಾ ಮಾತೆ; ಗ್ಯಾರಂಟಿ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಅತ್ತೆ-ಸೊಸೆ!

Gruha Lakshmi Scheme

ಗದಗ: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣವನ್ನು ಮಹಿಳೆಯರು ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಈ ದುಡ್ಡಿನಿಂದ ಮಗನಿಗೆ ಬೈಕ್‌ ಕೊಡಿಸಲು ತಾಯಿಯೊಬ್ಬರು ಇತ್ತೀಚೆಗೆ ಮುಂಗಡ ಹಣ ನೀಡಿ ಗಮನ ಸೆಳೆದಿದ್ದರು. ಇದೀಗ ಯೋಜನೆ ಹಣದಿಂದ ಅತ್ತೆ-ಸೊಸೆ, ಬೋರ್‌ವೆಲ್‌ ಕೊರೆಸಿರುವುದು ಕಂಡುಬಂದಿದ್ದು, ಭರ್ಜರಿ ನೀರು ಸಿಕ್ಕಿದೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಅವರು ಪ್ರತಿ ತಿಂಗಳು ತಮಗೆ ಬರುತ್ತಿದ್ದ ಗೃಹ ಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು, 44 ಸಾವಿರ ರೂ.ಗಳನ್ನು ನೀಡಿದ್ದಾರೆ.

ಬೋರ್‌ವೆಲ್ ಕೊರೆಸಲು 60 ಸಾವಿರ ರೂ. ಖರ್ಚು ಆಗಿದ್ದು, ಇದರಲ್ಲಿ 44 ಸಾವಿರ ರೂ.ಗಳನ್ನು ಅತ್ತೆ-ಸೊಸೆ ನೀಡಿದ್ದರೆ, ಉಳಿದ ಹಣವನ್ನು ಮಗ ಹಾಕಿ ಬೋರ್‌ವೆಲ್ ಕೊರಿಸಿದ್ದಾರೆ. ಇನ್ನು ಕೊಳವೆ ಬಾವಿಯಲ್ಲಿ ಭರ್ಜರಿ ನೀರು ಬಂದಿದ್ದರಿಂದ ಅತ್ತ-ಸೊಸೆ ಸಂತಸಗೊಂಡಿದ್ದು, ಸಿದ್ದರಾಮಯ್ಯ ಅವರು ನೀಡಿದ ಗೃಹ ಲಕ್ಷ್ಮಿ ಯೋಜನೆ ತುಂಬಾನೆ ಅನುಕೂಲವಾಗಿದೆ. ಹೀಗಾಗಿ ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅತ್ತೆ ಸೊಸೆ ಹೇಳಿದ್ಧಾರೆ.

ಇತ್ತೀಚೆಗೆ ಮಹಿಳೆಯೊಬ್ಬರು ಗೃಹ ಲಕ್ಷ್ಮಿ ಯೋಜನೆಯ ಹಣ ಬಳಸಿಕೊಂಡು, ತನ್ನ ನಾಲ್ವರು ಹೆಣ್ಣು ಮಕ್ಕಳ ಉದ್ಯೋಗಕ್ಕೆ ದಾರಿ ಮಾಡಿಕೊಟ್ಟಿದ್ದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ರೂ. 24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕು ರೂಪಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶ.

ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶದ ಪ್ರಧಾನಿಯೇ ಅಪಪ್ರಚಾರಕ್ಕೆ ಇಳಿದಿರುವ, ಇಡೀ ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದರು.

ಈ ಸುದ್ದಿಯನ್ನೂ ಓದಿ | Rain Damage: ರಾಜಧಾನಿಯಲ್ಲಿ ಮಳೆ ಹಾನಿ ತಡೆಗೆ 5,000 ಕೋಟಿ ರೂ.ಗಳ ಶಾಶ್ವತ ಯೋಜನೆ