ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಬೆಳ್ಳಂಬೆಳಗ್ಗೆಯೇ ಬಿಲ್ಡರ್ಗಳ ಮನೆ ಮೇಲೆ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬಿಲ್ಡರ್ಗಳ ನಿವಾಸ, ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪಾಳು ಕೊಳವೆಬಾವಿ ಮುಚ್ಚದಿದ್ದರೆ ಜೈಲು, ವಿಧೇಯಕ ಪಾಸ್
ಬೆಳಗಾವಿ: ಪಾಳು ಕೊಳವೆಬಾವಿ ಮುಚ್ಚದಿದ್ದರೆ ಜೈಲು ಮತ್ತು ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಅಧಿವೇಶನದಲ್ಲಿ ಎಂಟು ವಿಧೇಯಕಗಳನ್ನು ನಿನ್ನೆ ರಾತ್ರಿ ಅಂಗೀಕರಿಸಲಾಯಿತು.
ಬೆಳಗಾವಿ ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನ (Belagavi Winter Session) ಸೋಮವಾರ ರಾತ್ರಿ 1 ಗಂಟೆಯವರೆಗೂ ನಡೆಯಿತು. ಪಾಳು ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ಅವಘಡಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ವಿಧೇಯಕವನ್ನು ಅಂಗೀಕರಿಸಲಾಯಿತು.
ಹೊಸ ತಿದ್ದುಪಡಿಯಂತೆ, ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಅದನ್ನು ಕೊರೆದ ಸಂಸ್ಥೆಯ ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸುವ ಅಂಶ ವಿಧೇಯಕದಲ್ಲಿ ಸೇರಿಸಲಾಗಿದೆ.
ಇದನ್ನೂ ಓದಿ: 7 ಲಕ್ಷ ರೂ. ಆದಾಯ: ತೆರಿಗೆ ವಿನಾಯಿತಿ ಮಿತಿ ಏರಿಕೆ