Wednesday, 18th December 2024

HSRP plate: ವಾಹನ ಮಾಲಿಕರಿಗೆ ಸಿಹಿ ಸುದ್ದಿ, ಎಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಸದ್ಯಕ್ಕೆ ದಂಡ ಇಲ್ಲ

hsrp deadline

ಬೆಂಗಳೂರು: ಇದು ವಾಹನ ಮಾಲೀಕರಿಗೆ ಸಿಹಿ ಸುದ್ದಿ. ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಇನ್ನೂ ಆಳವಡಿಸದ ವಾಹನ ಮಾಲಿಕರ ಮೇಲೆ ಮುಂದಿನ ಆದೇಶದವರೆಗೂ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಈಗಾಗಲೇ ಸಾರಿಗೆ ಇಲಾಖೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31 ರವರೆಗೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದೆ.

ಈ ಬಗ್ಗೆ ಮಾತನಾಡಿದ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ, ಕೋರ್ಟ್ ಡಿಸೆಂಬರ್ 31 ರ ವರೆಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್​ಆರ್​ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ. ಇನ್ನು ಹೆಚ್ಚಿನ ವಾಹನ ಮಾಲೀಕರು ಹೆಚ್ಎಸ್​ಆರ್​ಪಿ ಆಳವಡಿಕೆಗೆ ನಿರಾಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜನೆ ಮಾಡಲು ತೀರ್ಮಾನ ಮಾಡಿದೆ.

ಹೈಕೋರ್ಟ್ ನಿರ್ದೇಶನ ನೀಡುವರೆಗೆ ವಾಹನ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬಾರದು. ಜೊತೆಗೆ ದಂಡ ವಿಧಿಸಬಾರದು ಎಂದು ಸಾರಿಗೆ ಇಲಾಖೆಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿರುವುದು ವಾಹನ ಸವಾರರನ್ನು ನಿರಾಳರನ್ನಾಗಿಸಿದೆ.