Wednesday, 18th December 2024

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಆಗುತ್ತಾ? ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದೇನು?

lakshmi hebbalkar

ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ (Central Government) ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ (Lakshmi Hebbalkar) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ ಅಂಗನವಾಡಿ ನೌಕರರ ಬೆಳಗಾವಿ ಚಲೋ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ | Lakshmi Hebbalkar: ಗೃಹಲಕ್ಷ್ಮೀ ಫಲಾನುಭವಿಗಳೊಂದಿಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್!

ಅಂಗನವಾಡಿ ಕಾರ್ಯಕರ್ತರಿಗೆ ವಿಮಾ ಯೋಜನೆ ಜಾರಿ, ವೇತನ ಪರಿಷ್ಕರಣೆ, ಮೊಟ್ಟೆ ದರ ಪರಿಷ್ಕರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮೀ ಯೋಜನೆಯನ್ನು ನಮ್ಮ ಇಲಾಖೆಯಿಂದ ಜಾರಿಗೆ ತರುವ ಮೂಲಕ ಬಲಿಷ್ಠರಾಗಿದ್ದೇವೆ. ವೇತನ ಹೆಚ್ಚಳ ಏರಿಕೆ ಸಂಬಂಧ ಮುಖ್ಯಮಂತ್ರಿಗಳ ಜತೆ ಮಾತನಾಡುವೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Kidney Health: ಕಿಡ್ನಿ ಆರೋಗ್ಯದ ಕುರಿತು ಈ ಸಂಗತಿ ತಿಳಿದುಕೊಳ್ಳುವುದು ಅತಿ ಮುಖ್ಯ

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಎನ್.ಸಿದ್ದೇಶ್ವರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್‌, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.