Wednesday, 18th December 2024

Shivamogga News: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ನಂಜಪ್ಪ ಲೇಔಟ್‌ನಲ್ಲಿರುವ ಇಂಪಿರಿಯರ್ ಕಾಲೇಜಿನಲ್ಲಿ ಬುಧವಾರ ನಡೆದಿದೆ. ಮುಬಷಿರ್ ಬಾನು (17) ಮೃತ ದುರ್ದೈವಿ.

ದ್ವಿತೀಯ ಪಿಯುಸಿ ಓದುತ್ತಿದ್ದ ಮುಬಷಿರ್‌ ಬಾನು, ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಬಿದ್ದಿದ್ದಾಳೆ. ಪ್ರೌಢ ಶಾಲೆಯ ಶಿಕ್ಷಕರು ಕಾಲೇಜಿಗೆ ಬಂದ ಹಿನ್ನೆಲೆಯಲ್ಲಿ ಮಾತನಾಡಿಸಲೆಂದು ಪ್ರಿನ್ಸಿಪಾಲ್ ಕಚೇರಿಗೆ ಬರುತ್ತಿದ್ದ ವೇಳೆ ಲೋ ಬಿಪಿಯಿಂದ ಮೂರ್ಛೆ ತಪ್ಪಿ ಬಿದ್ದಿದ್ದಾಳೆ. ಈ ವೇಳೆ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಯುವತಿ ಬಿದ್ದು ಸಾವನ್ನಪ್ಪಿದ ವಿಡಿಯೋ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ಈ ಸುದ್ದಿಯನ್ನೂ ಓದಿ | Boat Capsized: ಮುಂಬೈ ಬೋಟ್‌ ದುರಂತ; ಮೃತರ ಸಂಖ್ಯೆ 13ಕ್ಕೆ ಏರಿಕೆ: ಅಪಘಾತದ ವಿಡಿಯೊ ವೈರಲ್‌

ಕೋಲಾರದಲ್ಲಿ ಭೀಕರ ಅಪಘಾತ; ಬೊಲೆರೋ ಡಿಕ್ಕಿಯಾಗಿ ಐವರ ದುರ್ಮರಣ

Road Accident

ಕೋಲಾರ: ಬೊಲೆರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿ-ಗುಡಿಪಲ್ಲಿ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ. ಕೋನಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪನ ಪತ್ನಿ ಅಲುವೇಲಮ್ಮ (30) ಸೇರಿ ಐವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ದುರಂತ ನಡೆದಿದೆ ಎನ್ನಲಾಗಿದೆ. ಬೈಕ್‌ಗಳಿಗೆ ಡಿಕ್ಕಿಯಾದ ಬಳಿಕ ಬೊಲೆರೋ ರಸ್ತೆಬದಿಗೆ ಉರುಳಿದೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಸಾವು

Soldier Dies

ಬೆಳಗಾವಿ: ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು (Soldier Dies) ಮೃತಪಟ್ಟಿದ್ದಾರೆ. ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್​ ಅವರು ಡಿ. 14ರಂದು ಲಡಾಖ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಕೊನೆಯುಸಿರೆಳೆದಿದ್ದರು. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.

ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿದೆ. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ ಲಡಾಖ್‌ನಲ್ಲಿ ನಡೆದ ದುರಂತದಲ್ಲಿ ಮಹೇಶ್​ ಪ್ರಾಣ ತೆತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | J&K Fire accident: ಭೀಕರ ಅಗ್ನಿ ದುರಂತ- ಮಾಜಿ ಡಿಎಸ್ಪಿ ಸೇರಿದಂತೆ 6 ಜನರ ದುರ್ಮರಣ