Wednesday, 27th November 2024

ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಶಿರಸಿ: ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ರೈತ ನಾಯಕರು ಎಂದು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ ಪ್ರಚೋದನೆಗೆ ಒಳಗಾಗದೆ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ಸಾರಿಗೆ ನೌಕರರಿಗೆ ಹಾಗೂ ಸಾರಿಗೆ ನೌಕರರ ಸಂಘಟನೆಗಳಿಗೆ ಧನ್ಯವಾದಗಳು.

ಕೋಡಿಹಳ್ಳಿ ಚಂದ್ರಶೇಖರ ಅವರು ಅನಗತ್ಯವಾಗಿ ತಮಗೆ ಬೇಡವಾದ ಕ್ಷೇತ್ರದಲ್ಲಿ ಮೂಗು ತೂರಿಸಿ ರಾಜ್ಯದಲ್ಲಿ ಶಾಂತಿ ಕದಡುವ ಕೃತ್ಯಕ್ಕೆ ಕೈ ಹಾಕಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಇಂತಹ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೆನೆ ಎಂದು
ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.