ಬೆಂಗಳೂರು: ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ (kidnap case) ಸಂಬಂಧ ಷರತ್ತುಬದ್ಧ ಜಾಮೀನು ಪಡೆದಿರುವ ಭವಾನಿ ರೇವಣ್ಣ (Bhavani Revanna) ಅವರ ಜಾಮೀನಿನ ಷರತ್ತುಗಳಲ್ಲಿ ಸಡಿಲಿಕೆ ಮಾಡಿ ಹೈಕೋರ್ಟ್ (Karnataka High court) ಆದೇಶ ನೀಡಿದೆ.
ಇಂದು ಕಿಡ್ನಾಪ್ ಕೇಸ್ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಭವಾನಿ ರೇವಣ್ಣಗೆ ಜಾಮೀನು ಷರತ್ತು ಸಡಿಲಿಕೆ ನೀಡಿ ಆದೇಶ ಹೊರಡಿಸಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಹಾಸನ, ಮೈಸೂರು ಜಿಲ್ಲೆಗಳನ್ನು ಪ್ರವೇಶಿಸದಂತೆ ನಿರ್ಬಂಧ ಹೊರಡಿಸಲಾಗಿತ್ತು. ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಭೇಟಿಗೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ 15 ದಿನಗಳ ಕಾಲ ಹಾಸನ, ಮೈಸೂರು ಭೇಟಿಗೆ ಅವಕಾಶ ಮಾಡಿಕೊಟ್ಟಿದೆ. ಸಾಕ್ಷಿಗಳ ಭೇಟಿ ಸೇರಿ ಇತರ ಜಾಮೀನು ಷರತ್ತು ಉಲ್ಲಂಘಿಸಬಾರದು. ಉಲ್ಲಂಘಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸದ್ಯ ಅರ್ಜಿಯ ವಿಚಾರಣೆಯನ್ನು ಜನವರಿ 9 ಕ್ಕೆ ನಿಗದಿಪಡಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ; ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್