ಚಿಕ್ಕಬಳ್ಳಾಪುರ : ನಗರ ಹೊರವಲಯ ಎಸ್‌ಜೆಸಿಐಟಿ ಕ್ಯಾಂಪಸ್‌ನ ಬಿಜಿಎಸ್ ಆಡಿಟೋರಿಯಂನಲ್ಲಿ ನಾಳೆ ೨೧ರ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಮಟ್ಟದ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಪ್ರಥಮ ಸಮ್ಮೇಳನ ನಡೆಯಲಿದೆ ಎಂದು ನಾಗರಾಜ್‌ಗೌಡ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಸಂಸ್ಥೆಯಿಂದ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು
ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಂಬ ಸಂಸ್ಥೆ ೨೦೨೨ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯವನ್ನು ಉದ್ಯೋಗಿಗಳನ್ನಾಗಿಸದೆ ಉದ್ಯಮಿಗಳನಾಗಿಸುವುದೇ ಈ ಸಂಸ್ಥೆಯ ಉದ್ದೇಶವಾಗಿದೆ ಇದರ ಅಂಗವಾಗಿ ರಾಜ್ಯದಲ್ಲಿ ಎಲ್ಲೆಲ್ಲಿ ಒಕ್ಕಲಿಗ ಸಮುದಾಯ ಬಲಿಷ್ಠವಾಗಿದೆಯೋ ಅಂತಹ ಜಿಲ್ಲೆಗಳಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ವಕ್ಕಲಿಗರ ಪಡೆ ಕಟ್ಟುವ ಉದ್ದೇಶದಿಂದ ಸಮಾವೇಶ ಮಾಡುವ ಮೂಲಕ ಸಮುದಾಯವನ್ನು ಉದ್ಯಮ ದತ್ತ ಆಕರ್ಷಿತರಾಗುವಂತೆ ಮಾಡುವ ಮಹದುದ್ದೇಶ ಹೊಂದಿದ್ದೇವೆ ಎಂದರು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಡಾ. ನಿರ್ಮಲಾನಂದ ನಾಥ ಮಹಾ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಆಶೀರ್ವಾದದೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗೆ ಸಮಾವೇಶ ನಡೆಯುತ್ತಿದೆ.
ಈ ಸಮಾವೇಶದಲ್ಲಿ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ವಹಿಸಲಿದ್ದಾರೆ. ಇವರೊಂದಿಗೆ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿ, ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಶ್ರೀ ಮಂಗಳನಾಥ ಸ್ವಾಮೀಜಿ ಫಸ್ಟ್ ಸರ್ಕಲ್ ಮಾರ್ಗದರ್ಶಿ ಜಯರಾಮ್ ರಾಯಪುರ ಇರುವರು. ಮುಖ್ಯ ಅತಿಥಿ ಗಳಾಗಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂಸಿ ಸುಧಾಕರ್, ಗೌರಿಬಿದ ನೂರು ಶಾಸಕರಾದ ಪುಟ್ಟಸ್ವಾಮಿಗೌಡ, ಬಾಗೇಪಲ್ಲಿ ಶಾಸಕರಾದ ಎಸ್‌ಎನ್. ಸುಬ್ಬಾರೆಡ್ಡಿ, ಶಿಡ್ಲಘಟ್ಟ ಶಾಸಕರಾದ ರವಿಕುಮಾರ್ ಭಾಗವಹಿಸುವರು ಎಂದು ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಉದ್ಯಮಿಗಳು ನೂತನವಾಗಿ ಉದ್ಯಮ ಆರಂಭಿಸಲಿರುವವರು, ಉದ್ಯಮ ಪತಿಗಳಾಗಲು ಆಸಕ್ತಿ ಇರುವವರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಫಸ್ಟ್ ಸರ್ಕಲ್ ಉದ್ಯಮಿ ವಕ್ಕಲಿಗ ೨೦೨೫ರ ಆಯೋಜಕರು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಯೋಜಕ ನಟರಾಜ ಗೌಡ, ರಾಜ್ಯ ಮಹಿಳಾ ಕಾರ್ಯದರ್ಶಿ ಮಂಜುಳಾ ಪ್ರಕಾಶ್, ರಾಜ್ಯ ಸಂಯೋಜಕ ನಾಗರಾಜ್ ಗೌಡ, ಬೆಂಗಳೂರು ಉತ್ತರ ಸಂಯೋಜಕ ಧರ್ಮ, ಬೆಂಗಳೂರು ದಕ್ಷಿಣ ಸಂಯೋಜಕ ರೋಹಿತ್, ಬೆಂಗಳೂರು ಸೆಂಟ್ರಲ್ ಸಂಯೋಜಿಕ ಅನು ಮತ್ತು ಇತರರು ಇದ್ದರು.