Friday, 20th December 2024

Protest: ರಾಜ್ಯವೇ 12 ಸಾವಿರ ನೀಡಲಿ ಎಂದು ಒತ್ತಾ ಯಿಸಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ

ಕೇಂದ್ರ ಸರಕಾರ ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವವರೆಗೆ

ಚಿಕ್ಕಬಳ್ಳಾಪುರ: ೨೦೧೪ ರಿಂದ ಈವರೆಗೆ ಕೇಂದ್ರ ಸರಕಾರ ಬಿಸಿಯೂಟ ನೌಕರರ ಗೌರವಧನ ಹೆಚ್ಚಳ ಮಾಡಿಲ್ಲ. ಕೇಂದ್ರ ಸರಕಾರ ೨೬ಸಾವಿರಕ್ಕೆ ಗೌರವಧನ ಹೆಚ್ಚಿಸಬೇಕು.ಅಲ್ಲಿಯವರೆಗೆ ರಾಜ್ಯ ಸರಕಾರವೇ ಪಾಂಡಿಚೆರಿ ಹರಿ ಯಾಣ, ತಮಿಳುನಾಡು ಮಾದರಿಯಲ್ಲಿ ೭ ರಿಂದ ೧೨ಸಾವಿರ ವೇತನ ಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಗುರುವಾರ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಜಿಲ್ಲಾ ಸಂಘವು ಸಿಐಟಿಯು ನೇತೃತ್ವದಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ನೌಕರರನ್ನು ಉದ್ದೇಶಿಸಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳ ಮಾತನಾಡಿದರು.

ಮಧ್ಯಾನ್ಹದ ಬಿಸಿಯೂಟ ಯೋಜನೆ ಪ್ರಾರಂಭವಾಗಿ ೨೪ ವರ್ಷಗಳು ಕಳೆಯುತ್ತಿದೆ. ಲಕ್ಷಾಂತರ ಮಕ್ಕಳಿಗೆ ಹಾಲು ನೀಡಿ, ಶಾಲಾ ಸ್ವಚ್ಛತೆ ಮಾಡಿ. ಬಿಸಿ ಬಿಸಿ ಆಹಾರ ನೀಡಿ, ಶಾಲೆಯಲ್ಲಿ ನೀಡುವ ದಿನನಿತ್ಯದ ಎಲ್ಲಾ ಕೆಲಸ ಮಾಡಿ, ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ತಾಯ್ತತನದ ಪ್ರೀತಿ ನೀಡುವ ಪರಿಶ್ರಮ ಕೆಲಸವಾಗಿದೆ.ಇಂತಹ ಕೆಲಸ ಮಾಡು ತ್ತಿರುವ ನೌಕರರಿಗೆ ಕನಿಷ್ಟವೇತನವನ್ನೂ ನೀಡದೆ ಶೋಷಣೆ ಮಾಡುತ್ತಿರುವುದು ಸರಿಯಲ್ಲ ಎಂದರು.

ಮೇಲ್ನೋಟಕ್ಕೆ ಸರ್ಕಾರದ ಸುತ್ತೋಲೆಯಲ್ಲಿ ೪ ಗಂಟೆ ಕೆಲಸವೆಂದು ನಿಗದಿಯಾಗಿದೆ, ಆದರೆ ಪ್ರತಿ ಶಾಲೆಯಲ್ಲಿ ದಿನಕ್ಕೆ ೬ಗಂಟೆ ಕೆಲಸ ಮಾಡುತ್ತೇವೆ.ಅಜೀಂ ಪ್ರೇಮ್‌ಜಿ ಪ್ರತಿಷ್ಟಾನ ನೀಡುತ್ತಿರುವ ಕೋಳಿ ಮೊಟ್ಟೆ ಬೇಯಿಸಿ ಸುಲಿದು ಮಕ್ಕಳಿಗೆ ಕೊಡುವುದು,ಆಹಾರ ಪದಾರ್ಥಗಳನ್ನು ಸ್ವಚ್ಛಗೊಳಿಸುವುದು,ಕೆಲವೆಡೆ ನೂರಾರು ಮಕ್ಕಳಿಗೆ ಚಪಾತಿ ಮಾಡಿಕೊಡುವುದು ಶ್ರಮದಾಯಕ ಕೆಲಸವಾಗಿದೆ.ಬರಗಾಲ ಬೇಸಿಗೆ ಕಾಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಕನಿಷ್ಟವೇತನ ೬ ಸಾವಿರ ನೀಡಲೇಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳು..
ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವುದನ್ನು ನಿಲ್ಲಿಸಬೇಕು.ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಖಾಯಂ ಮಾಡುವ ತನಕ ೪೫ ಮತ್ತು ೪೬ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು.ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.

ಶಾಲೆಗಳಲ್ಲಿ ಗ್ರೂಪ್ “ಡಿ” ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ, ಕೈತೊಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆAದು ನೇಮಿಸಿ ನೇಮಕಾತಿ ಆದೇಶ ನೀಡಬೇಕು.ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು.ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು.ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು.

ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು.ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಅಡುಗೆಯವರು ಇರಲೇಬೇಕು ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಜವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.