Saturday, 21st September 2024

ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದ ಏಮ್ಸ್ ಆಸ್ಪತ್ರೆ ದಾದಿಯರು

ನವದೆಹಲಿ : ದೆಹಲಿಯ ಪ್ರತಿಷ್ಟಿತ ಆಸ್ಪತ್ರೆ ಏಮ್ಸ್ ಆಸ್ಪತ್ರೆಯ ನರ್ಸ್ ಗಳು ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ದ್ದಾರೆ.

ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ನರ್ಸ್ ಗಳು ಪ್ರತಿಭಟನೆಗಿಳಿದಿದ್ದು, ಯೂನಿಯನ್ ಬೇಡಿಕೆ ಈಡೇರಿಸುವವರೆಗೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ. ಒಟ್ಟು 23 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಿಳಿದಿದ್ದಾರೆ.

ವೇತನ ಹೆಚ್ಚಳ, ಗುತ್ತಿಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳು ಈ ಪಟ್ಟಿ ಯಲ್ಲಿದೆ. ಆಸ್ಪತ್ರೆಯಲ್ಲಿ ಸುಮಾರು 5000 ನರ್ಸ್ ಗಳು ಕಾರ್ಯ ನಿರ್ವಹಿಸುತ್ತಿದ್ದು. ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಹಿನ್ನೆಲೆ ರೋಗಿಗಳು ಅತಂಕದಲ್ಲಿದ್ದಾರೆ.