Sunday, 22nd December 2024

Chikkaballapur News: ನೂತನ ಕ್ರೀಡಾ ವಸತಿ ಶಾಲೆಯ ಕಟ್ಟಡ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಅವರು ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಶಟಲ್ ಬ್ಯಾಟ್ ಮಿಟನ್ ಕೋರ್ಟ್, ಕ್ರೀಡಾಂಗಣ ಶೌಚಾಲಯ, ನೂತನವಾಗಿ ನಿರ್ಮಾಣ ಗೊಂಡಿರುವ ಕ್ರೀಡಾ ವಸತಿ ಶಾಲೆಯ ಕಟ್ಟಡ ವೀಕ್ಷಣೆ ಮಾಡಿದರು. ಈ ವೇಳೆ ಅಲ್ಲಿನ ಮಕ್ಕಳ ಯೋಗಕ್ಷೇಮ ಹಾಗೂ ಮೂಲಭೂತ ಸೌಕರ್ಯಗಳನ್ನು ವಿಚಾರಿಸಿ ಕ್ರೀಡಾ ತರಬೇತಿಗಾರರನ್ನು ನೇಮಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಎಂ.ಜಗದೀಶ, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.