Sunday, 22nd December 2024

Modi in Kuwait: ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಪ್ರಶಸ್ತಿ ಪ್ರದಾನ

Narendra Modi

ಕುವೈತ್‌: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಭಾನುವಾರ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರದಾನ ಮಾಡಲಾಯಿತು. ಇದು ಅವರಿಗೆ ದೇಶವೊಂದು ನೀಡಿದ 20ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ. ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಕುವೈತ್‌ನ ನೈಟ್‌ಹುಡ್ ಪ್ರಶಸ್ತಿಯಾಗಿದ್ದು, ಇದನ್ನು ರಾಷ್ಟ್ರದ ಮುಖ್ಯಸ್ಥರು ಮತ್ತು ವಿದೇಶಿ ಸಾರ್ವಭೌಮರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ(Modi in Kuwait).

ಈ ಹಿಂದೆ ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್ ಅವರಂತಹ ವಿದೇಶಿ ನಾಯಕರಿಗೆ ಪ್ರಶಸ್ತಿ ನೀಡಲಾಗಿದೆ. ಕಳೆದ ತಿಂಗಳು, ಪ್ರಧಾನಿ ಮೋದಿಯವರು ಗಯಾನಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಅನ್ನು ತಮ್ಮ ರಾಷ್ಟ್ರಕ್ಕೆ ಭೇಟಿ ನೀಡಿದಾಗ ಅವರಿಗೆ ನೀಡಲಾಯಿತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ಗಯಾನಾದ ಅತ್ಯುನ್ನತ ಪ್ರಶಸ್ತಿಯನ್ನು ನನಗೆ ನೀಡಿದ ನನ್ನ ಸ್ನೇಹಿತ ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇದು ನಮ್ಮ ಸಂಬಂಧಗಳಿಗೆ ನಿಮ್ಮ ಆಳವಾದ ಬದ್ಧತೆಗೆ ಜೀವಂತ ಪುರಾವೆಯಾಗಿದೆ, ಇದು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.

ಡೊಮಿನಿಕಾದ ಅಧ್ಯಕ್ಷ ಸಿಲ್ವಾನಿ ಬರ್ಟನ್ ಅವರು ಪ್ರಧಾನಮಂತ್ರಿಗೆ “ಡೊಮಿನಿಕಾ ಗೌರವ ಪ್ರಶಸ್ತಿ”ಯನ್ನೂ ನೀಡಿದರು. ಡೊಮಿನಿಕಾದಿಂದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸುತ್ತೇನೆ” ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Modi in Kuwait: ಅರೇಬಿಕ್‌ ಭಾಷೆಯಲ್ಲಿ ರಾಮಾಯಣ, ಮಹಾಭಾರತ ಕೃತಿ- ಆಟೋಗ್ರಾಫ್‌ ಹಾಕಿದ ಪ್ರಧಾನಿ ಮೋದಿ