Monday, 23rd December 2024

Weather Update: ಇಂದಿನಿಂದ ಮೂರು ದಿನ 13 ಜಿಲ್ಲೆಗಳಲ್ಲಿ ಭಾರೀ ಮಳೆ

Rain

ಬೆಂಗಳೂರು: ಇಂದಿನಿಂದ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆ(Weather Update)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗಲಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಡಿ. 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ‘ಡಿಸೆಂಬರ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿತ್ರದುರ್ಗ. ದಾವಣಗೆರೆ ಹಾಗೂ ಕೋಲಾರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಥಂಡಿ ವಾತಾವರಣ ಮುಂದುವರೆಯಲಿದ್ದು, ದಟ್ಟ ಮಂಜು ಹಾಗೂ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು. ಮೈಸೂರು ಮಂಡ್ಯ ಜಿಲ್ಲೆಯಲ್ಲಿ ಡಿ.24 ಹಾಗೂ ಡಿ.25 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ ಹಾಗೂ 18 ಡಿಗ್ರಿ ಸೆಲ್ಸಿಯಸ್‌ ಇರಬಹುದು. ಮುಂದಿನ ಎರಡು ದಿನಗಳವರೆಗೂ ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವೇ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ನಷ್ಟು ಕಂಡುಬರಲಿದೆ ಎಂದು ಹೇಳಿದೆ.

ಈ ಸುದ್ದಿಯನ್ನೂ ಓದಿ: Allu Arjun: ಪತ್ನಿ ಮತ್ತು ಮಗಳನ್ನು ತಬ್ಬಿಕೊಂಡು ಭಾವುಕರಾದ ಅಲ್ಲು ಅರ್ಜುನ್- ವಿಡಿಯೊ ಭಾರೀ ವೈರಲ್‌