Tuesday, 24th December 2024

Karnataka Film Chamber of Commerce: ಸಿಎಂ ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಪದಾಧಿಕಾರಿಗಳು

Karnataka Film Chamber of Commerce

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber of Commerce) ನೂತನ ಪದಾಧಿಕಾರಿಗಳು, ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ (G. Parameshwar) ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಚಿತ್ರರಂಗದ ಕೆಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಇತ್ತೀಚಿಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷ ಎಂ.ನರಸಿಂಹಲು, ಉಪಾಧ್ಯಕ್ಷರಾದ ಕೆ.ವಿ. ವೆಂಕಟೇಶ್, ‌ಶಿಲ್ಪ ಶ್ರೀನಿವಾಸ್, ಕೆ.ಓ. ರಂಗಪ್ಪ,‌ ಗೌರವ ಕಾರ್ಯದರ್ಶಿಗಳಾದ ಡಿ.ಕೆ. ರಾಮಕೃಷ್ಣ, ಎಂ.ಎನ್. ಕುಮಾರ್, ಎಲ್.ಸಿ. ಕುಶಾಲ್ ಹಾಗೂ ಖಜಾಂಚಿ ಬಿ.ಮಹದೇವ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಚಿತ್ರರಂಗದ ಕೆಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಈ ಸುದ್ದಿಯನ್ನೂ ಓದಿ | Max Movie: ಕಿಚ್ಚ ಸುದೀಪ್ ಅಭಿನಯದ ʼಮ್ಯಾಕ್ಸ್ʼ ಚಿತ್ರದ ಪ್ರಿರಿಲೀಸ್ ಇವೆಂಟ್‌‌ನಲ್ಲಿ ಟ್ರೇಲರ್ ಲಾಂಚ್

ಚಿತ್ರರಂಗದ ಹೆಚ್ಚಿನ ವಿಷಯಗಳ ಚರ್ಚಿಸುವ ಸಲುವಾಗಿ ಸಮಯಾವಕಾಶವನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.