ಹುಬ್ಬಳ್ಳಿ: ಸಿ.ಟಿ.ರವಿ ಅಶ್ಲೀಲ ಹೇಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ನೀಡಿದ್ದು, ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಮಾಡಲು ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಯಾವುದೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದಿದ್ದಾರೆ.
ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವೊಂದು ಕಾರಣಕ್ಕೆ ಕೇಸ್ ದಾಖಲಿಸುವುದು ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.
ಈ ಸುದ್ದಿಯನ್ನೂ ಓದಿ | Viral Video: ಚಂಡಮಾರುರತ ಅಬ್ಬರಕ್ಕೆ ಹಡಗುಕಟ್ಟೆ ಸಂಪೂರ್ಣ ಧ್ವಂಸ; ಮುಂದೇನಾಯ್ತು? ವಿಡಿಯೊ ನೋಡಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣ- ಇತರ 5 ಆರೋಪಿಗಳಿಗೂ ಜಾಮೀನು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ(Renukaswamy Murder Case)ದಲ್ಲಿ ನಟ ದರ್ಶನ್(Actor Darshan) ಮತ್ತು ಪವಿತ್ರಾ ಗೌಡಗೆ(Pavitra Gowda) ಜಾಮೀನು ಸಿಕ್ಕಿರುವ ಬೆನ್ನಲ್ಲೇ ಇದೀಗ ಇತರ ಐವರು ಆರೋಪಿಗಳಿಗೂ ಬೇಲ್ ಸಿಕ್ಕಿದೆ. ಜೈಲಿನಲ್ಲಿ ಉಳಿದಿದ್ದ ಐವರಿಗೆ ಹೈಕೋರ್ಟ್ ನಿನ್ನೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಹಾಗೂ ವಿನಯ್‌ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ನ್ಯಾಯಾಲಯ ಅವರ ಅರ್ಜಿಯನ್ನು ಪುರಸ್ಕರಿಸಿದೆ. , ಈ ಮೂಲಕ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ 17 ಮಂದಿಗೆ ಜಾಮೀನಿನಲ್ಲಿ ಹೊರಬಂದಿದ್ದಾರೆ.
ಕೋರ್ಟ್ ವಿಧಿಸಿದ ಷರತ್ತುಗಳೇನು?
ಇನ್ನು ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್ ಕೆಲವೊಂದು ಷರತ್ತು ವಿಧಿಸಿದೆ. 1 ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸಬೇಕು. ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು ಹಾಗೂ ಮುಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಕೂಡದು ಎಂದು ಷರತ್ತುವಿಧಿಸಿ ನ್ಯಾ.ಜೈಶಂಕರ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿದರು.
ಕಳೆದ ಜೂನ್ 8ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಪಟ್ಟಣಗೆರೆ ಶೆಡ್ನಲ್ಲಿ ಹತ್ಯೆ ಮಾಡಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್ ತಕ್ಷಣವೇ ಇವರನ್ನು ಯಾಕೆ ಬಂಧಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.
ಈ ಸುದ್ದಿಯನ್ನೂ ಓದಿ: Actor Darshan: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ