ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ (shiva rajkumar) ಅವರಿಗೆ ಶಸ್ತ್ರ ಚಿಕಿತ್ಸೆ (Surgery) ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.
ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ನಿನ್ನೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆಯಲಿದ್ದಾರೆ.
ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಿವಣ್ಣ ಸರ್ಜರಿ ಮಾಡಿಸಿಕೊಂಡರು. ಆರು ಗಂಟೆಗಳ ಕಾಲ ಆಪರೇಷನ್ ನಡೆದಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ. ರಾತ್ರಿ 11.30-12ರ ವೇಳೆಗೆ ಆಪರೇಷನ್ ಪೂರ್ಣಗೊಂಡಿದೆ. ಶಿವರಾಜ್ ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಗಿತ್ತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋಗಿದ್ದರು.
ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಎಂದು ನಿನ್ನೆ ದೂರವಾಣಿ ಕರೆ ಮಾಡಿ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದರು. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದರು. ಎರಡು ದಿನಗಳ ಮುನ್ನ ಅವರು ಅಮೆರಿಕಕ್ಕೆ ಹೊರಟಿದ್ದು, ಗಣ್ಯರು ಅವರನ್ನು ಬೀಳ್ಕೊಂಡಿದ್ದರು.
ಇದನ್ನೂ ಓದಿ: Shiva Rajkumar: ಸರ್ಜರಿಗಾಗಿ ಅಮೇರಿಕಕ್ಕೆ ಹೊರಟ ಶಿವಣ್ಣ; ಸುದೀಪ್ ಸೇರಿ ಹಲವರಿಂದ ಶುಭ ಹಾರೈಕೆ