Thursday, 26th December 2024

Karnataka High Court: ರಜೆ ಪಡೆಯದೆ ಗೈರುಹಾಜರಾಗುವುದು ದುರ್ನಡತೆ, ಶಿಕ್ಷೆಗೆ ಅರ್ಹ: ಹೈಕೋರ್ಟ್

Karnataka High Court

ಬೆಂಗಳೂರು: ಉದ್ಯೋಗಿಗಳು ರಜೆ (Leave) ಅನುಮತಿ ಪಡೆಯದೆ ಕೆಲಸಕ್ಕೆ ಗೈರುಹಾಜರಾಗುವುದು (Absent) ದುರ್ನಡತೆಯಾಗುತ್ತದೆ. ಶಿಸ್ತುಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ನೀಡಿದೆ.

ಉದ್ಯೋಗಿಯ ಅನುಮತಿ ಪಡೆಯದ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು ಎಂದು ಸೂಚನೆ ನೀಡಿರುವ ಹೈಕೋರ್ಟ್, ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಬಿಎಂಟಿಸಿ ಆದೇಶವನ್ನು ಎತ್ತಿ ಹಿಡಿದಿದೆ.

ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಯಿಂದ ರಾಯಚೂರಿನ ಟಿ. ದೇವಪ್ಪ ಅವರನ್ನು ವಜಾಗೊಳಿಸಿದ್ದ ತನ್ನ ಕ್ರಮವನ್ನು ರದ್ದುಪಡಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೇಲ್ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿದೆ. ಈ ಪ್ರಕರಣದಲ್ಲಿ ರಜೆ ಕೋರಿ ಅರ್ಜಿ ಸಲ್ಲಿಸದೆ ಮತ್ತು ಉನ್ನತ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರುಹಾಜರಾಗಿದ್ದರೂ ದೇವಪ್ಪನನ್ನು ಸೇವೆಗೆ ಮರು ನಿಯೋಜಿಸಲು ಬಿಎಂಟಿಸಿಗೆ ನಿರ್ದೇಶಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ಇದನ್ನೂ ಓದಿ: Christmas: ಕರುಣೆ, ಪ್ರೇಮದ ಸಂದೇಶ ಸಾರುವ ಕ್ರಿಸ್‌ಮಸ್; ಶಾಂತಿದೂತನ ಆಗಮನದ ನೆನಪಿನ ಹಬ್ಬ‌