ವಿವಿಧ ಕಡೆ ರಸ್ತೆ ತಡೆ ನಡೆಸಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ಚಿಂತಾಮಣಿ: ನಗರದ ತಾಲ್ಲೂಕು ಕಛೇರಿ ಮುಂದೆ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಹಾಗೂ ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್( Dr B R Ambedkar) ರವರವ ಬಗ್ಗೆ ವಿರುದ್ದ ಅಮಿತ್ ಶಾ(Amit shah) ಅವಹೇಳನಕಾರಿ ಹೇಳಿಕೆ ಹಾಗೂ ಚಿಂತಾಮಣಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆಭರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಕೊಳಕು ಬಟ್ಟೆಯನ್ನು ಸುತ್ತಿದ್ದಾರೆ.
ಆ ಬಟ್ಟೆಯನ್ನು ತೆರೆವುಗೊಳುಸುವುದಕ್ಕೆ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದು ಮನವಿಗೆ ಪ್ರತಿಕ್ರಿಯಿಸದೇ ಇರುವ ಅಧಿಕಾರಿಗಳು ತುಂಬಾ ಬೇಜಾವಾಬ್ದಾರಿಯಿಂದ ವರ್ತಿಸಿದ್ದಾರೆ .ಆ ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತಾ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಬುಧವಾರ ಚಿಂತಾಮಣಿ ತಾಲ್ಲೂಕಿನ ತಳಗವಾರ,ಮುರುಗಮಲ್ಲ, ಬೆಂಗಳೂರು ವೃತ್ತದಲ್ಲಿ ದಲಿತ ಪರ ಸಂಘಟನೆ ಗಳ ಪದಾಧಿಕಾರಿಗಳು ರಸ್ತೆ ತಡೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಕೆಲವರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.
ಇನ್ನೂ ನಗರದ ತಾಲೂಕು ಕಚೇರಿ ಆವರಣದ ವೃತ್ತದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆಯಲು ಮುಂದಾದಾಗ ಪೊಲೀಸರು ರಸ್ತೆ ತಡೆ ನಡೆಸಲು ಅವಕಾಶ ಕಲ್ಪಿಸದೆ ಬಂಧಿಸಲು ಮುಂದಾದರು.
ನಂತರ ಪ್ರತಿಭಟನಾಕಾರರು ರಸ್ತೆ ತಡೆಯನ್ನು ಹಿಂಪಡೆದು ತಾಲೂಕು ಕಚೇರಿ ಮುಂಭಾಗದಲ್ಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.