Saturday, 28th December 2024

Manmohan Singh: ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೀಡಿದ ಅಪರೂಪದ ಕೊಡುಗೆಗಳಿವು

Manmohan Singh passes way

ನವದಹಲಿ: ದೇಶದ ಮಾಜಿ ಪ್ರಧಾನಿ ಹಾಗೂ ಭಾರತದ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ (Manmohan Singh passes way) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷದ ಡಾ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ ಎನಿಸಿಕೊಂಡ ಅವರು ತಮ್ಮ ಆಡಳಿತವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದವರು.

ಮುಕ್ತ ಮಾರುಕಟ್ಟೆ: ಅವರು ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗ ಭಾರತದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಮುಕ್ತ ಮಾರುಕಟ್ಟೆಯೊಂದೇ ದೇಶದ ಮುಂದಿರುವ ಮಾರ್ಗ ಎಂದು ಬಲವಾಗಿ ನಂಬಿದ್ದ ಅವರು ಅದಕ್ಕೆ ಅನುಗುಣವಾಗಿ ಕಾರ್ಯ ಪ್ರವೃತ್ತರಾದರು. 1994-95ರ ಬಜೆಟ್‌ನಲ್ಲಿ ಭಾರೀ ಬದಲಾವಣೆಗೆ ಕೈ ಹಾಕಿದರು. ಭಾರತ ಇಂದು ವಿಶ್ವದ 5ನೇ ದೊಡ್ಡ ಆರ್ಥಿಕತೆ ಹೊಂದಿದ ಆಗಿದೆ ಎನ್ನುವುದಾದರೆ, ಅದಕ್ಕೆ ಸಿಂಗ್‌ ಹಾಕಿದ ಅಡಿಪಾಯವನ್ನು ಯಾರೂ ಮರೆಯುವಂತಿಲ್ಲ.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (NREGA): 2005ರಲ್ಲಿ ಈ ಯೋಜನೆ ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ. ಈ ಯೋಜನೆ ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೂಲಿ ಉದ್ಯೋಗವನ್ನು ನೀಡಿತು. ಜನರ ಜೀವನೋಪಾಯವನ್ನು ಸುಧಾರಿಸುವ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಹೆಚ್ಚಿಸುವುದೇ ಈ ಯೋಜನೆಯ ಉದ್ದೇಶವಾಗಿದೆ

ಮಾಹಿತಿ ಹಕ್ಕು ಕಾಯಿದೆ (RTI): 2005 ರಲ್ಲಿ ಅಂಗೀಕರಿಸಲ್ಪಟ್ಟ RTI ನಾಗರಿಕರಿಗೆ ಸಾರ್ವಜನಿಕ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುವ ಹಕ್ಕನ್ನು ನೀಡುತ್ತದೆ, ಇದರಿಂದಾಗಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸಿತ್ತು.

ಆಧಾರ್ ಸೌಲಭ್ಯ: ನಿವಾಸಿಗಳಿಗೆ ವಿಶಿಷ್ಟ ಗುರುತನ್ನು ಒದಗಿಸಲು, ವಿವಿಧ ಸೇವೆಗಳಿಗೆ ಪ್ರವೇಶವನ್ನು ಒದಗಿಸಲು ಆಧಾರ್ ಯೋಜನೆಯನ್ನು ಇವರ ಅವಧಿಯಲ್ಲಿಯೇ ಆರಂಭಿಸಲಾಗಿತ್ತು. ಪ್ರಸ್ತುತ ಈಗ ಆಧಾರ್ ಕಾರ್ಡ್​ ಪ್ರತಿಯೊಂದಕ್ಕೆ ಅನಿವಾರ್ಯವಾಗಿದೆ.

ನೇರ ಲಾಭ ವರ್ಗಾವಣೆ: ಡಾ. ಮನಮೋಹನ್ ಸಿಂಗ್ ಅವರ ಸರ್ಕಾರವು ನೇರ ಲಾಭ ವರ್ಗಾವಣೆ ವ್ಯವಸ್ಥೆಯನ್ನು ಜಾರಿಗೆ ತಂದಿತು, ಇದು ಕಲ್ಯಾಣ ನಿಧಿ ವಿತರಣೆಯನ್ನು ಸರಳೀಕರಿಸಿತು ಮತ್ತು ಅನೇಕ ಲೋಪದೋಷಗಳನ್ನು ತೆಗೆದುಹಾಕಿತು.

ಕೃಷಿ ಸಾಲ ಮನ್ನಾ (2008): ಕೃಷಿ ಬಿಕ್ಕಟ್ಟು ನೀಗಿಸಲು, ರೈತರನ್ನು ಸಾಲದ ಸುಳಿಯಿಂದ ಹೊರತರಲು ಡಾ ಮನಹೋಹನ್ ಸಿಂಗ್ ಅವರು ಕೃಷಿ ಸಾಲ ಮನ್ನಾ ಮಾಡಿದ್ದರು. ಸುಮಾರು 60,000 ಕೋಟಿ ರೂ.ಗಳ ಸಾಲ ಮನ್ನಾ ಮೂಲಕ ರೈತರಿಗೆ ಪರಿಹಾರ ಒದಗಿಸುವ ಕಾರ್ಯ ಮನಮೋಹನ್‌ ಸಿಂಗ್‌ ಸರ್ಕಾರ ಅಧಿಕಾರದಲ್ಲಿದ್ದಾಗಿತ್ತು,