ಚಿಕ್ಕಬಳ್ಳಾಪುರ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ೧೦೦೦ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಸಂ:ಇಡಿ/ಕೆಇಎ/ಆಡಳಿತ/ಸಿಆರ್/೦೪/೨೦೨೩-೨೪ ದಿನಾಂಕ:೨೧/೦೨/೨೦೨೪ ರಂತೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸ ಲಾಗಿರುತ್ತದೆ.
೧೦೦೦ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ ೨೯/೦೯/೨೦೨೪, ೨೬/೧೦/೨೦೨೪ ಹಾಗೂ ೨೭/೧೦/೨೦೨೪ ರಂದು ಕಡ್ಡಾಯ ಕನ್ನಡ, ಪತ್ರಿಕೆ-೧ ಮತ್ತು ಪತ್ರಿಕೆ-೨ ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆದಿರುತ್ತದೆ.ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮ ಗಳು ೨೦೨೧ ರಂತೆ ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು ೪೨ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅರ್ಹತೆ ಪಡೆದಿರುವ ಒಟ್ಟು ೧೦೮೮ ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೇರಿಟ್ ಪಟ್ಟಿಯಲ್ಲಿ ೧:೩ ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬ0ಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕ ದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳನ್ನು ಮತ್ತು ಪ್ರಮಾಣ ಪತ್ರಗಳ ಪರಿಶೀಲನೆಗಾಗಿ ಅಭ್ಯರ್ಥಿಗಳು ಜನವರಿ ೬ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಆಡಿಟೋರಿಯಂ, ಜಿಲ್ಲಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆ ಇಲ್ಲಿಗೆ ಖುದ್ದಾಗಿ ಹಾಜರಾಗುವುದು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದಲ್ಲಿ ಎರಡನೇ ಅವಕಾಶ ನೀಡಲಾಗುವುದಿಲ್ಲ.
ಅರ್ಹತೆ ಪಡೆದಿರುವ ಒಟ್ಟು ೧೦೮೮ ಅಭ್ಯರ್ಥಿಗಳ ಪೈಕಿ ಎಸ್ಸಿ-ಪಿಹೆಚ್ಸಿ ಮೀಸಲಾತಿಯ ೦೪ ಹುದ್ದೆಗಳಿಗೆ ಅಭ್ಯರ್ಥಿಗಳು ೧:೩ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ ೧೧೪ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.