Sunday, 5th January 2025

Raichur News: ಲಿಂಗಸುಗೂರಿನಲ್ಲಿ ಯುವಕ ಅನುಮಾನಾಸ್ಪದ ಸಾವು; ಕೊಲೆ ಶಂಕೆ

Raichur News

ರಾಯಚೂರು: ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ (Raichur News) ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಐದನಾಳ ಗ್ರಾಮದಲ್ಲಿ ನಡೆದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಗಣೇಶ್ (21) ಮೃತ ಯುವಕ.

ಗ್ರಾಮದ ಹೊರವಲಯದ ಬಾವಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸ್ನೇಹಿತರೊಂದಿಗೆ ಬಾವಿ ಬಳಿ ಯುವಕ ಮದ್ಯಪಾನ ಮಾಡಿದ್ದ ಎನ್ನಲಾಗಿದ್ದು, ಕುಡಿದ ಅಮಲಿನಲ್ಲಿ ಕಾಲು ಜಾರಿ ಬಾವಿಗೆ ಬಿದ್ದಿರುವುದಾಗಿ ಸ್ನೇಹಿತರ ಹೇಳಿದ್ದಾರೆ. ಆದರೆ, ಕೊಲೆ ಮಾಡುವ ಉದ್ದೇಶದಿಂದ ಪಾರ್ಟಿ ಮಾಡಲು ಕರೆದೊಯ್ದಿರುವ ಆರೋಪ ಕೇಳಿಂದ ಹಿನ್ನೆಲೆಯಲ್ಲಿ ನಿಂಗಪ್ಪ, ರಮೇಶ್ ವಿರುದ್ಧ ಕೊಲೆ ಆರೋಪ ಪ್ರಕರಣ ದಾಖಲಾಗಿದೆ.

ಮೃತ ಗಣೇಶ‌ನ ತಂದೆ ಮಾನಪ್ಪ ನೀಡಿದ ದೂರಿನ ಮೇರೆಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Self Harming: ಹೊಸ ಸಂಸತ್‌ ಭವನದ ಬಳಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾವು

ತನ್ನ ಹಿರಿಯ ಮಗನಾದ ಗಣೇಶನನ್ನು ಆರೋಪಿಗಳು ಯಾವುದೋ ದುರುದ್ದೇಶದಿಂದ ಡಿ. 26ರಂದು ರಾತ್ರಿ 9 ಗಂಟೆಗೆ ಮನೆಯಿಂದ ಹೊರಗಡೆ ಕರೆಯಿಸಿಕೊಂಡು, ಐದನಾಳ ಗ್ರಾಮದ ಹಳ್ಳದ ಹತ್ತಿರ ಇರುವ ಬಾವಿಯ ದಂಡೆಯ ಹತ್ತಿರ ಪಾರ್ಟಿ ಮಾಡಿ ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಭಾವಿಯಲ್ಲಿ ನೂಕಿದ್ದಾರೆ ಎಂದು ತಂದೆ ಮಾನಪ್ಪ ದೂರು ನೀಡಿದ್ದಾರೆ.

ಮಗ ಬಾವಿಯಲ್ಲಿ ಬಿದ್ದ ವಿಷಯ ರಾತ್ರಿ 11.45 ಗಂಟೆಗೆ ತಿಳಿದು ಬಾವಿ ಬಳಿ ಹೋಗಿ ಗಣೇಶನನ್ನು ಹೊರ ತೆಗೆದು ವೈದ್ಯಕೀಯ ಚಿಕಿತ್ಸೆ ಕುರಿತು ಲಿಂಗಸೂರು ಸರಕಾರಿ ಆಸ್ಪತ್ರೆಗೆ ಸೇರಿಸಿದಾಗ ಮಾಡಿದಾಗ ಚೇತರಿಸಿಕೊಳ್ಳದೇ ಡಿ.27ರಂದು ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಮಗನ ಕಾಲಿನ ಎರಡು ಕಾಲಿನ ಹೆಬ್ಬೆರಳಿಗೆ ಹಾಗೂ ಇತರೆ ಬೆರಳುಗಳಿಗೆ ಗಾಯಗಳಾಗಿತ್ತು. ಹೀಗಾಗಿ ಮಗನ ಕೊಲೆ ಮಾಡಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮೃತ ಯುವಕನ ತಂದೆ ಕೋರಿದ್ದಾರೆ.

ಈ ಸುದ್ದಿಯನ್ನು ಓದಿ | Actor Charith Balappa: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕನ್ನಡ ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ

ವಿಮೆ ಹಣದ ಆಸೆಗೆ ತಂದೆಯನ್ನೇ ಕೊಂದ ಕಿರಿ ಮಗ; ಮನನೊಂದು ಹಿರಿಯ ಮಗ ಆತ್ಮಹತ್ಯೆ!

Murder Case

ಮೈಸೂರು: ಎಲ್‌ಐಸಿ ವಿಮೆ ಹಣದ ಆಸೆಗೆ ಸ್ವಂತ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ (Murder Case) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗೆರೋಸಿ ಕಾಲೋನಿಯಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ತಂದೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕಿರಿಯ ಮಗ ಹೇಳಿದ್ದ. ಹೀಗಾಗಿ ತಂದೆಯ ಸಾವಿನಿಂದ ಮನನೊಂದು ಹಿರಿಯ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಂಡು ಕೊಲೆ ಆರೋಪಿಯಾಗಿದ್ದಾನೆ. ಈತ ತನ್ನ ತಂದೆ ಅಣ್ಣಪ್ಪನ ಹೆಸರಿನಲ್ಲಿ ವಿಮೆ ಮಾಡಿಸಿದ್ದ. ಆ ಹಣವನ್ನು ಲಪಟಾಯಿಸಲು ಸ್ವಂತ ತಂದೆಯನ್ನೆ ಕೊಲೆ ಮಾಡಿದ್ದಾನೆ. ಟಿಬೇಟಿಯನ್​ ಕ್ಯಾಂಪ್‌ನಲ್ಲಿ ಕೆಲಸ ಇದೆ ಹೋಗಿ ಎಂದು ಹೇಳಿದ್ದ ಮಗ ಪಾಂಡು ಮಾತನ್ನು ಕೇಳಿ ತಂದೆ ಅಪ್ಪಣ್ಣ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ತಲೆಗೆ ದೊಣ್ಣೆಯಿಂದ ಹೊಡೆದು ಮಗ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಬಿ.ಎಂ.ರಸ್ತೆಯ ಮಂಚದೇವನಹಳ್ಳಿ ಸಮೀಪ ಎಸೆದು, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿದ್ದ. ಆದರೆ ಈ ವಿಷಯ ತಿಳಿಯದೆ ತಂದೆ ಕಳೆದುಕೊಂಡ ದುಃಖದಲ್ಲಿದ್ದ ಆರೋಪಿ ಪಾಂಡು ಅಣ್ಣ ಧರ್ಮ ಎಂಬುವವರು ಕೂಡ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ತಂದೆ ಸಾವನ್ನಪ್ಪಿದ್ದಾರೆ ಎಂದು ಪಾಂಡು ಬೈಲುಕುಪ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದನು. ಆದರೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ಪಾಂಡುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ವಿಮೆ ಹಣಕ್ಕೆ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ಈ ಸುದ್ದಿಯನ್ನೂ ಓದಿ | Manmohan Singh: ಶನಿವಾರ ರಾಜ್‌ಘಾಟ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ