ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರೇಳಿ 8.41 ಕೋಟಿ ರೂ. ಮೌಲ್ಯದ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ ಪ್ರಕರಣದಲ್ಲಿ ಈಗಾಗಲೇ ಐಶ್ವರ್ಯಗೌಡ ಮತ್ತು ಪತಿ ಹರೀಶ್ ಬಂಧನವಾಗಿದೆ. ಹೀಗಾಗಿ ತಮ್ಮ ಹೆಸರು ದುರುಪಯೋಗಪಡಿಸಿಕೊಂಡು ವಂಚನೆ ಎಸಗಿರುವ ಐಶ್ವರ್ಯ ಗೌಡ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ದೂರು ಸಲ್ಲಿಸಿದ್ದಾರೆ.
ಐಶ್ವರ್ಯಗೌಡ ಉರುಫ್ ನವ್ಯಶ್ರೀ ಅವರು ನನ್ನ ಹೆಸರು ದುರುಪಯೋಗಪಡಿಸಿಕೊಂಡು ಹಲವರಿಗೆ ವಂಚನೆ ನಡೆಸಿರುವುದಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನ್ಯಾಯಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ಈ ಸುದ್ದಿಯನ್ನೂ ಓದಿ | Viral video: ನಾನು ಅಣ್ಣಾಮಲೈ ಅಲ್ಲ ʼಸೊಣ್ಣಾಮಲೈʼ; ಚಾಟಿಯಿಂದ ಹೊಡೆದುಕೊಂಡು ಅಣಕಿಸಿದ ಲಾಯರ್ ಜಗದೀಶ್!
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್
ಬೀದರ್: ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor death) ಪ್ರಕರಣವನ್ನು ಸಿಐಡಿ ತನಿಖೆಗೆ (CID Enquiry) ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Home minister Dr G Parameshwar) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.
ಬೀದರ್‌ನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ (26) ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‌ನೋಟ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ತನಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಬರೆದಿದ್ದ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ಮುಖಂಡರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Contractor Self Harming: ಬೀದರ್‌ನಲ್ಲಿ ಗುತ್ತಿಗೆದಾರನ ಆತ್ಮಹತ್ಯೆ, ಇಬ್ಬರು ಪೊಲೀಸರು ಸಸ್ಪೆಂಡ್