Sunday, 5th January 2025

Road Accident: ಶರಾವತಿ ಸೇತುವೆ ಮೇಲೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ, ಮೂವರ ಸಾವು

bus hit bike

ಹೊನ್ನಾವರ : ಇಂದು ಮುಂಜಾನೆ ಉತ್ತರ ಕನ್ನಡ (uttara kannada news) ಜಿಲ್ಲೆಯ ಹೊನ್ನಾವರ (Honnavara) ಪಟ್ಟಣದ ಶರಾವತಿ ಸೇತುವೆ ಮೇಲೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸವಾರರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ನಾಯ್ಕ ( 25), ಖರ್ವಾದ ರಮೇಶ ನಾಯ್ಕ (22) ಮೃತ ದುರ್ದೈವಿಗಳು.

ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಿಲಿಂಡರ್‌ ಸ್ಫೋಟದಲ್ಲಿ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರು ದಿನಕ್ಕೊಬ್ಬರಂತೆ ಮೃತಪಡುತ್ತಿದ್ದು, ಮಂಗಳವಾರ ಬೆಳಗ್ಗೆ ಮತ್ತೊಬ್ಬರು ಮೃತಪಡುವ ಮೂಲಕ ಸಾವಿನ ಸಂಖ್ಯೆ 8ಕ್ಕೇರಿದೆ.

ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇದೀಗ 9 ಗಾಯಾಳುಗಳ ಪೈಕಿ ಕಿಮ್ಸ್​​ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಜಸ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು. ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕಿಮ್ಸ್ ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿದೆ. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗಿಲ್ಲ. ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಇದನ್ನೂ ಓದಿ: Poonch Accident: ಜಮ್ಮುವಿನ ಪೂಂಛ್‌ ಬಳಿ ಅಪಘಾತ; ಕರ್ನಾಟಕದ ಯೋಧರ ಸಾವು