ಮುಂಬೈ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂ ಹೇರಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಮಾರ್ಗಸೂಚಿ ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು. ಮುಂದಿನ ಆರು ತಿಂಗಳಕಾಲ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಕರೋನವೈರಸ್ ಹರಡುವಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ನಾವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕನಿಷ್ಠ ಆರು ತಿಂಗಳಕಾಲ ಅಭ್ಯಾಸ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ರಾತ್ರಿ ಕರ್ಫ್ಯೂ ಅಥವಾ ಲಾಕ್ ಡೌನ್ ಅನ್ನು ಹೇರುವುದಕ್ಕೆ ತಜ್ಞರು ಒಲವು ತೋರುತ್ತಿದ್ದಾರೆ ಎಂದು ಸಿಎಂ ಠಾಕ್ರೆ ಹೇಳಿದ್ದು, ಆದರೆ ಕೋವಿಡ್-19 ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿರುವುದರಿಂದ ಈ ಕ್ರಮಗಳನ್ನು ಅವರು ಬೆಂಬಲಿ ಸುವುದಿಲ್ಲ ಎಂದು ಹೇಳಿದ್ದಾರೆ.