ನವ ದೆಹಲಿ: ಬೆಳ್ಳುಳ್ಳಿ ಮತ್ತು ಜೇನುತುಪ್ಪ (Honey and Garlic) ಇವೆರಡನ್ನೂ ಆಯುರ್ವೇದದಲ್ಲಿ ಬಹಳ ಪ್ರಯೋಜನಕಾರಿ ಎಂದು ತಿಳಿಸಲಾಗಿದೆ. ಬೆಳ್ಳುಳ್ಳಿ ಮತ್ತು ಜೇನುತುಪ್ಪದಲ್ಲಿ ಹಲವು ರೀತಿಯ ಔಷಧೀಯ ಗುಣಗಳು ಅಡಗಿದ್ದು, ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಅರೆದು ಜೇನುತುಪ್ಪದಲ್ಲಿ ಬೆರೆಸಿ ತಿನ್ನುವುದರಿಂದ ಹಲವು ರೀತಿಯ ಪ್ರಯೋಜನ ಸಿಗಲಿದೆ ಎಂದು ತಜ್ಞರು ವಿವರಿಸಿದ್ದಾರೆ. ಆ ಕುರಿತಾದ ವಿವರ ಇಲ್ಲಿದೆ (Health Tips).
ರೋಗನಿರೋಧಕ ಕಾರ್ಯವನ್ನು ಹೆಚ್ಚಿಸುತ್ತದೆ
ಜೇನುತುಪ್ಪ ಮತ್ತು ಬೆಳ್ಳುಳ್ಳಿ ಇವೆರಡೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಹೊಂದಿವೆ. ಇವು ಎರಡರ ಬಳಕೆಯು ದೇಹದಲ್ಲಿನ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ತೂಕ ಕಡಿಮೆ ಮಾಡಬಹುದು
ಬೆಳ್ಳುಳ್ಳಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಇದರ ಸೇವನೆಯಿಂದ ದೇಹದಲ್ಲಿನ ಹೆಚ್ಚುವರಿ ಕೊಬ್ಬು ಕಡಿಮೆಯಾಗಲಿದ್ದು, ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದರೆ ನಿಯಮಿತವಾಗಿ ಜೇನುತುಪ್ಪ ಮತ್ತು ಬೆಳ್ಳುಳ್ಳಿಯ ಮಿಶ್ರಣವನ್ನು ಸೇವಿಸಿ.
ಹೃದಯದ ಆರೋಗ್ಯ ವೃದ್ದಿಸುತ್ತದೆ
ಬೆಳ್ಳುಳ್ಳಿ ಜತೆ ಜೇನುತುಪ್ಪದ ಮಿಶ್ರಣ ಮಾಡಿ ತಿನ್ನುವುದರಿಂದ ಹೃದಯದ ಆರೋಗ್ಯವನ್ನು ನೀವು ಕಾಪಾಡಿಕೊಳ್ಳಬಹುದು. ಇದರ ಸೇವನೆಯಿಂದ ಹೃದಯದ ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಹೊರ ಹಾಕಬಹುದು. ಇದು ರಕ್ತ ಪರಿಚಲನೆ ಸಕ್ರಿಯಗೊಳ್ಳುವಂತೆ ಮಾಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ರಕ್ತದೊತ್ತಡವನ್ನು ಮತ್ತು ಹೃದ್ರೋಗದ ಅಪಾಯವನ್ನು ನಿವಾರಿಸುತ್ತದೆ.
ಜೀರ್ಣಕ್ರಿಯೆಯನ್ನು ವೃದ್ದಿಸುತ್ತದೆ
ಬೆಳ್ಳುಳ್ಳಿ ಮತ್ತು ಜೇನುತುಪ್ಪವು ಜೀರ್ಣ ಕ್ರಿಯೆಗೆ ನೆರವಾಗುತ್ತದೆ. ಹೀಗಾಗಿ ಈ ಸಮಸ್ಯೆಯಿಂದ ಬಳಲುತ್ತಿರುವವರು ಸೇವಿಸಬೇಕು. ಬೆಳ್ಳುಳ್ಳಿ ಹೊಟ್ಟೆಯ ಆಮ್ಲಗಳ ಉತ್ಪಾದನೆಯನ್ನು ಮತ್ತು ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಾಗಾಗಿ ಆರೋಗ್ಯಕರ ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಇವುಗಳ ಸೇವನೆ ಮಾಡಿ.
ಗಂಟಲು ನೋವು ನಿವಾರಿಸುವ ಶಕ್ತಿ ಇದೆ
ಜೇನುತುಪ್ಪ ಮತ್ತು ಬೆಳ್ಳುಳ್ಳಿಯನ್ನು ಒಟ್ಟಿಗೆ ತಿನ್ನುವುದರಿಂದ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಜೇನುತುಪ್ಪ ಮತ್ತು ಬೆಳ್ಳುಳ್ಳಿ ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ನೋಯುತ್ತಿರುವ ಗಂಟಲು ಮತ್ತು ಕೆಮ್ಮಿಗೆ ಪರಿಹಾರವನ್ನು ನೀಡಡುತ್ತದೆ.
ಚರ್ಮದ ಆರೋಗ್ಯ
ಹೊಳೆಯುವ ಚರ್ಮವನ್ನು ಪಡೆಯಲು ಬೆಳ್ಳುಳ್ಳಿ ಮತ್ತು ಜೇನುತುಪ್ಪವನ್ನು ಬಳಸಲಾಗುತ್ತದೆ. ಬೆಳ್ಳುಳ್ಳಿಯು ಆ್ಯಂಟಿ ಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಮೊಡವೆ, ಎಸ್ಜಿಮಾ ಮತ್ತು ಇತರ ಚರ್ಮದ ಸಮಸ್ಯೆ ಇದ್ದಲ್ಲಿ ಹೋಗಲಾಡಿಸಲು ಸಹಾಯ ಮಾಡುತ್ತದೆ. ಜೇನುತುಪ್ಪ ಚರ್ಮದಲ್ಲಿ ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಸುಟ್ಟಗಾಯ ಮತ್ತು ಇತರ ಚರ್ಮದ ಗಾಯಗಳನ್ನು ಗುಣಪಡಿಸುತ್ತದೆ.
ಉಸಿರಾಟದ ಆರೋಗ್ಯವನ್ನು ಸುಧಾರಿಸುತ್ತದೆ
ಕೆಮ್ಮು ಮತ್ತು ಆಸ್ತಮಾದಂತಹ ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತದೆ. ಇದು ಉರಿಯೂತ ನಿವಾರಕ ಮತ್ತು ಆ್ಯಂಟಿ ಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ಉಸಿರಾಟದ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೇನುತುಪ್ಪವನ್ನು ಹೆಚ್ಚಾಗಿ ಗಂಟಲು, ಕೆಮ್ಮು ಮತ್ತು ಇತರ ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ.
ಇದನ್ನು ಓದಿ:Balenciaga Bubble Outfit Fashion: ವೈರಲ್ ಆಯ್ತು ಪ್ಯಾಕಿಂಗ್ಗೆ ಬಳಸುವ ಬಬಲ್ ವ್ರಾಪ್ ಔಟ್ಫಿಟ್!