ನೊಯ್ಡಾ : ಬೆಳಗ್ಗೆ ಜಾಗಿಂಗ್ ಹೋದಾಗ ವೇಗವಾಗಿ ಬಂದ ಜಾಗ್ವಾರ್ ಕಾರೊಂದು ಅಪ್ರಾಪ್ತ ಯುವಕನ ಮೇಲೆ ಹರಿದಿದ್ದು, 14 ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ (Uttar Pradesh) ನೊಯ್ಡಾದಲ್ಲಿ ನಡೆದಿದೆ. ಸ್ಟೆಲ್ಲರ್ ಜೀವನ್ ಸೊಸೈಟಿ ಬಳಿ ಗುರುವಾರ ಕಾರು ಬೆಳಿಗ್ಗೆ ಕಾರು ಹರಿದಿದೆ. (Car Accident)
ಸಂತ್ರಸ್ತ ಬಾಲಕನನ್ನು ನೀರಜ್ ಎಂದು ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಜಾಗಿಂಗ್ ಮಾಡಲು ತೆರಳಿದ್ದ. ಆಗ ವೇಗವಾಗಿ ಬಂದ ಜಾಗ್ವಾರ್ ಹಿಂದಿನಿಂದ ಅವನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನೀರಜ್ ತಲೆ ಮತ್ತು ಎದೆಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಜಾಗ್ವಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರನ್ನು ಅಜಾಗರೂಕತೆಯಿಂದ ಮತ್ತು ಅತಿವೇಗದಿಂದ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಬಾಲಕನ ತಂದೆ ಬಿಸ್ರಖ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಟೆಲ್ಲರ್ ಜೀವನ್ ಸೊಸೈಟಿ ಬಳಿ ಬಾಲಕನಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಚಾಲಕ ಮತ್ತು ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸದ್ಯ ಕಾರು ಚಾಲಕನ ವಿಚಾರಣೆ ನಡೆಯುತ್ತಿದೆ.
ಪ್ರತ್ಯೇಕ ಘಟನೆಯಲ್ಲಿ ಮುಂಬೈನ ಕುರ್ಲಾದ ಪಕ್ಕದ ಘಾಟ್ಕೋಪರ್ನಲ್ಲಿ ಭಾರಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟೆಂಪೋ ಐವರು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ನಂತರ ಟೆಂಪೋ ಚಾಲಕ ಉತ್ತಮ್ ಖಾರತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಆರೋಪಿಯನ್ನು ಸಾರ್ವಜನಿಕರು ಹಿಡಿದು ಘಾಟ್ಕೋಪರ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ : Pinarayi Vijayan: ಕೇರಳ ಸಿಎಂ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಬೆಂಗಾವಲು ವಾಹನಗಳೂ ಸರಣಿ ಡಿಕ್ಕಿ