Saturday, 11th January 2025

Roof collapse: ರೈಲ್ವೆ ಸ್ಟೇಷನ್‌ನಲ್ಲಿ ಛಾವಣಿ ಕುಸಿತ; 20 ಕಾರ್ಮಿಕರು ಸಿಲುಕಿರುವ ಶಂಕೆ

roof collapse

ಲಖನೌ: ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದ್ದಿದ್ದು ಹಲವು ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿರುವ ಘಟನೆ ಉತ್ತರಪ್ರದೇಶದ ಕನ್ನೌಜ್‌ನಲ್ಲಿ ನಡೆದಿದೆ. ಕನ್ನೌಜ್‌ ರೈಲು ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದು, ಪರಿಣಾಮವಾಗಿ 14 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಸುಮಾರು 20 ಕಟ್ಟಡ ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ(Roof collapse)

ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನೀಡುತ್ತಾ, ರೈಲ್ವೆ ಅಧಿಕಾರಿಯೊಬ್ಬರು, “ಉತ್ತರ ಪ್ರದೇಶದ ಕನ್ನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಸುಮಾರು 20 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ಇದೆ” ಎಂದು ಹೇಳಿದ್ದಾರೆ. ಗಾಯಗೊಂಡ 14 ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ಮಾಹಿತಿ ಪಡೆದಿದ್ದು, ತಕ್ಷಣ ಸ್ಥಳಕ್ಕೆ ತಲುಪಲು ಮತ್ತು ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಸುದ್ದಿಯನ್ನೂ ಓದಿ: Building Collapse: ಮೂರು ಅಂತಸ್ತಿನ ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ

Leave a Reply

Your email address will not be published. Required fields are marked *