Monday, 13th January 2025

Mahakumbh 2025: ಮಹಾಕುಂಭ ಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ- ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ

Mahakumbh 2025

ಲಖನೌ: ಉತ್ತರ ಪ್ರದೇಶದ (Uttar pradesh) ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ (Mahakumbh) ಮೇಳ ಜ.13 ರಿಂದ ಫೆ.26 ರವರೆಗೆ ನಡೆಯಲಿದ್ದು, ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಈ ನಡುವೆ ಅಹಿತಕರ ಘಟನೆಯೊಂದು ನಡೆದಿದ್ದು, ಭಕ್ತರಲ್ಲಿ ಆತಂಕವನ್ನು ಉಂಟು ಮಾಡಿದೆ. ಮಹಾರಾಷ್ಟ್ರದ ಜಲ್‌ಗಾಂವ್‌ ರೈಲ್ವೆ (Jalgaon) ನಿಲ್ದಾಣದಲ್ಲಿ ಕುಂಭಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಕಲ್ಲು(Stone thrown) ತೂರಾಟ ನಡೆದಿದೆ. ಜ.12ರಂದು ಸೂರತ್‌ನಿಂದ ಛಾಪ್ರಾಗೆ ತೆರಳುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್‌ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ರೈಲಿನ ಕಿಟಕಿಯ ಗಾಜಿಗೆ ಹಾನಿಯಾಗಿರುವುದು ತಿಳಿದು ಬಂದಿದೆ.

ತಪತಿ ಗಂಗಾ ಎಕ್ಸ್‌ಪ್ರೆಸ್‌ನ B6 ಕೋಚ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಚ್‌ನಲ್ಲಿ ಮಹಿಳೆಯರು, ಮಕ್ಕಳು ಸೇರದಂತೆ ಒಟ್ಟು 13 ಮಂದಿ ಇದ್ದರು ಎಂದು ತಿಳಿದು ಬಂದಿದೆ.

ಇಂದು ನಾವು ಸೂರತ್ ಉದ್ನಾದಿಂದ ಪ್ರಯಾಗ್‌ರಾಜ್‌ಗೆ ಹೊರಟಿದ್ದೇವೆ. ಎಲ್ಲಾ ಪ್ರಯಾಣಿಕರು ನಮ್ಮೊಂದಿಗಿದ್ದಾರೆ. ಜಲಗಾಂವ್‌ನಿಂದ ಕನಿಷ್ಠ 3 ಕಿಮೀ ಮುಂದೆ ಕೆಲವು ಸಮಾಜವಿರೋಧಿಗಳು ಕಲ್ಲು ರೈಲಿನ ಮೇಲೆ ಕಲ್ಲು ಎಸೆದಿದ್ದಾರೆ. ನಮಗೆ ಭದ್ರತೆ ಒದಗಿಸುವಂತೆ ನಾವು ರೈಲ್ವೆ ಸಚಿವರಿಗೆ ವಿನಂತಿಸುತ್ತೇವೆ. ಎಂದು ಹಾನಿಗೊಳಗಾದ ಕೋಚ್‌ನಲ್ಲಿದ್ದ ಪ್ರಯಾಣಿಕ ರಾಜೇಂದ್ರ ಗುಪ್ತಾ, ಹಾನಿಗೊಳಗಾದ ಕಿಟಕಿಯನ್ನು ತೋರಿಸಿ ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ಪ್ರಾರಂಭಿಸಿದ ರೈಲ್ವೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸ್ವಪ್ನಿಲ್ ನೀಲಾ ಜಲಗಾಂವ್ ಬಳಿಯ ಸೂರತ್ ಉದ್ನಾದಿಂದ ಬರುತ್ತಿದ್ದ ಈ ರೈಲಿನ ಮೇಲೆ ಕಲ್ಲು ತೂರಲಾಗಿದೆ. ಈ ಸಂದರ್ಭದಲ್ಲಿ ರೈಲ್ವೇ ರಕ್ಷಣಾ ಪಡೆ ತಕ್ಷಣ ಕ್ರಮ ಕೈಗೊಂಡು ರೈಲಿನಲ್ಲಿ ನಾಲ್ಕು ತಂಡಗಳನ್ನು ನಿಯೋಜಿಸಲಾಗಿದೆ. ದೂರು ಕೂಡ ದಾಖಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ : Mahakumbh: ಮಹಾಕುಂಭ ಮೇಳಕ್ಕೆ ಪ್ರಯಾಗ್‌ರಾಜ್‌ ಸಜ್ಜು; 40 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ

Leave a Reply

Your email address will not be published. Required fields are marked *