ಚೆನ್ನೈ: ತಮಿಳುನಾಡಿನ ಪಾಲಕ್ಕೋಡು ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳೇ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳನ್ನು ಶಾಲೆಗೆ ಓದಲು ಕಳುಹಿಸಿದರೆ ಅವರಿಂದಲೇ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವುದು ಎಷ್ಟು ಸರಿ ಎಂದು ಶಿಕ್ಷಕನ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಲೆಯ ಸಮವಸ್ತ್ರದಲ್ಲಿ ಪೊರಕೆ ಹಿಡಿದು ಬಾಲಕಿಯರು ಶೌಚಾಲಯ ಸ್ವಚ್ಚ ಮಾಡಿದ್ದಾರೆ. ಬಕೆಟ್ನಲ್ಲಿ ನೀರು ತಂದು ಪೊರಕೆಯಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಬಾಲಕಿಯರ ವಿಡಿಯೊ ಇದೀಗ ಬಹಳಷ್ಟು ವೈರಲ್ ಆಗಿದೆ. ಈ ವಿಡಿಯೊ ವೈರಲ್ ಆದ ಬಳಿಕ ಜಿಲ್ಲಾ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಂಡು ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದ್ದಾರೆ.(Viral Video)
ಪಾಲಕ್ಕೋಡುನಲ್ಲಿರುವ ಶಾಲೆಯಲ್ಲಿ 1 ರಿಂದ 8 ನೇ ತರಗತಿಯ ಬುಡಕಟ್ಟು ಸಮುದಾಯದ ಸುಮಾರು 150 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು ಶೌಚಾಲಯ ನಿರ್ವಹಣೆ, ನೀರು ತರುವುದು, ಶಾಲಾ ಆವರಣವನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಸ್ವಚ್ಛತಾ ಕಾರ್ಯಗಳನ್ನು ಮಕ್ಕಳೇ ಮಾಡುತ್ತಾರೆ. ತಮ್ಮ ಮಕ್ಕಳ ಶಿಕ್ಷಣ ಮತ್ತು ಯೋಗಕ್ಷೇಮಕ್ಕೆ ಧಕ್ಕೆಯಾಗುತ್ತಿದೆ ಎಂದು ಪಾಲಕರು ಶಿಕ್ಷಕರ ವಿರುದ್ದ ಕಿಡಿ ಕಾರಿದ್ದಾರೆ. ನಾವು ಮಕ್ಕಳನ್ನು ಶಾಲೆಗೆ ಕಳುಹಿಸುವುದು ಓದಲು, ಸ್ವಚ್ಛತೆಗೆ ಅಲ್ಲ ಎಂದು ಈ ಶಾಲೆಯ ಪೋಷಕರೊಬ್ಬರು ಶಿಕ್ಷಕರ ವಿರುದ್ಧ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.
तमिलनाडु : सरकारी स्कूल में बच्चों से साफ कराया टॉयलेट, प्रिंसिपल सस्पेंड #TamilNadu | School | Toilet Cleaning | Tamil Nadu pic.twitter.com/zVoW80r7nS
— News24 (@news24tvchannel) January 13, 2025
ಮಕ್ಕಳನ್ನ ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿರುವ ಶಾಲೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿಗಳ ಹಕ್ಕು ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಈ ಬಗ್ಗೆ ಕೂಲಂಕಷ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಮಕ್ಕಳಿಂದ ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೊ ಬಹಳಷ್ಟು ಭಾರೀ ವೈರಲ್ ಆಗಿತ್ತು.ಹೀಗಾಗಿ ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದನ್ನು ಶಿಕ್ಷಣ ಇಲಾಖೆ ಕಡ್ಡಾಯವಾಗಿ ನಿಷೇಧಿಸಿತ್ತು. ಇದೀಗ ಇದರ ನಡುವೆಯೂ ಇಂತಹದ್ದೇ ಘಟನೆ ನಡೆದಿರುವುದು ಈ ಶಾಲೆಯ ಶಿಕ್ಷಕನ ವರ್ತನೆಗೆ ನೆಟ್ಟಿಗರು ಕಿಡಿಕಾರಿದ್ದಾರೆ.
ಈ ಸುದ್ದಿಯನ್ನೂ ಓದಿ:Viral Video: ಬಾಹ್ಯಾಕಾಶದಲ್ಲಿ ಹಸಿರು ಬಣ್ಣದ ಅರೋರಾದ ಬೆಳಕಿನಾಟ! ವಿಸ್ಮಯಕಾರಿ ವಿಡಿಯೊ ವೈರಲ್