ಕಲಬುರಗಿ: ಆಟೋ ಚಾಲಕ ಮೆಹಬೂಬ ಎಂಬಾತ ಬಾಲಕಿಯೊಬ್ಬಳಿಗೆ ಅತ್ಯಾಚಾರದ (Physical Abuse) ಬೆದರಿಕೆ ಹಾಕಿದ ಪರಿಣಾಮ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಕುರಿತು ದೂರು ಕಲಬುರಗಿಯಲ್ಲಿ (Kalaburagi Crime News) ದಾಖಲಾಗಿದೆ.
ಅತ್ಯಾಚಾರ ಬೆದರಿಕೆಯಿಂದ ಹೆದರಿ, ಮನನೊಂದು 8ನೇ ತರಗತಿ ವಿದ್ಯಾರ್ಥಿನಿ ಮಹಾಲಕ್ಷ್ಮಿ ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ಮೆಹಬೂಬ ಎಂಬಾತನ ಕಿರುಕುಳದಿಂದ ಬೇಸತ್ತು ಮಹಾಲಕ್ಷ್ಮಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಮಹಾಲಕ್ಷ್ಮಿ ಶಾಲೆಗೆ ಹಾಗೂ ಮನೆಗೆ ಹೋಗುವಾಗ ರಸ್ತೆಯಲ್ಲಿ ಹಿಂಬಾಲಿಸಿ ಬರುತ್ತಿದ್ದ ಈತ, ನನ್ನ ಜೊತೆ ಮಾತನಾಡದಿದ್ದರೆ ನಿನ್ನನ್ನು ಅತ್ಯಾಚಾರ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಹೀಗಾಗಿ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವಿದ್ಯಾರ್ಥಿನಿಯ ತಂದೆ ಯಶವಂತರಾಯಗೌಡ ಬಿರಾದಾರ ಆರೋಪಿಸಿ ದೂರು ನೀಡಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಅವರು ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮಂಗಳೂರಿನಲ್ಲಿ ದಾರುಣ ಘಟನೆ, ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು
ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ.
ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ ಮಗುವಿಗೆ ಉಸಿರಾಟದ ಸಮಸ್ಯೆ ಉಲ್ಬಣಿಸಿತು. ನಿನ್ನೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ.