Saturday, 23rd November 2024

ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ: ನಾಗರಿಕರಿಗೆ ಗಾಯ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು,  7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದ ಬಳಿ ಬಂದಿರುವ ಉಗ್ರರು ಇದ್ದಕ್ಕಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಈ ವೇಳೆ ಇಬ್ಬರು ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ನಾಪತ್ತೆಯಾಗಿರುವ ಉಗ್ರರಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ವರದಿಗಳು ತಿಳಿಸಿವೆ.