Friday, 22nd November 2024

ಉತ್ತರಾಖಂಡ, ಒಡಿಶಾದಲ್ಲಿ ಲಘು ಭೂಕಂಪ

ಕಂಧಮಾಲ್: ಉತ್ತರಾಖಂಡ, ಒಡಿಶಾ ರಾಜ್ಯಗಳಲ್ಲಿ ಶನಿವಾರ ಲಘು ಭೂಕಂಪ ಸಂಭವಿಸಿದ್ದು, 3.3 ರಷ್ಟು ತೀವ್ರತೆ ದಾಖಲಾ ಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಉತ್ತರಾಖಂಡದ ಉತ್ತರಕಾಶಿಯಲ್ಲಿ ಬೆಳಗ್ಗೆ ಭೂಮಿ ಕಂಪಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.3 ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯಿಂದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದುವಿದೆ. ಒಡಿಶಾದ ಕಂಧಮಾಲ್ ಮತ್ತು ಗಂಜಮ್​ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ ಉಂಟಾಗಿದೆ.

5 ಕಿ.ಮೀ ಆಳದಲ್ಲಿ ಭೂಕಂಪನ ದ ಕೇಂದ್ರಬಿಂದು ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.