ನವದೆಹಲಿ: ರಾಷ್ಟ್ರೀಯ ಸೇನಾ ದಿನ(ಜನವರಿ 15) ವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ಯೋಧ ರನ್ನು ಗಣ್ಯರು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ.
ನಮ್ಮ ಭಾರತೀಯ ಸೇನೆ ಬಲಿಷ್ಠವಾಗಿದೆ. ಸೈನಿಕರು ಧೈರ್ಯಶಾಲಿಗಳಾಗಿದ್ದು ದೃಢ ನಿರ್ಧಾರ, ನಿಷ್ಠೆ, ಶ್ರದ್ಧೆ ಅವರಲ್ಲಿದೆ. ದೇಶಕ್ಕೆ ಹೆಮ್ಮೆ ತರುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ದೇಶವಾಸಿಗಳ ಪರವಾಗಿ ನಾನು ಭಾರತೀಯ ಸೇನೆಗೆ ಗೌರವ ಸಲ್ಲಿಸು ತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಫೀಲ್ಡ್ ಮಾರ್ಷಲ್ ಕೊಡಾಂಡೇರಾ ಎಂ. ಕಾರಿಯಪ್ಪ ಅವರ ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ ಭಾರತದಲ್ಲಿ ಪ್ರತಿವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. ಕೆ. ಎಂ.ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ 15 ಜನವರಿ 1949 ರಂದು ಅಧಿಕಾರ ವಹಿಸಿಕೊಂಡರು.