Saturday, 23rd November 2024

ರಾಮಮಂದಿರ ನಿರ್ಮಾಣ: 5 ಲಕ್ಷದ 100 ರೂ. ದೇಣಿಗೆ ನೀಡಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷದ 100 ರೂಪಾಯಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮೊದಲ ದೇಣಿಗೆಯಾಗಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಎಚ್ ಪಿಯ ಅಲೋಕ್ ಕುಮಾರ್, ‘ದೇಶದ ಪ್ರಥಮ ಪ್ರಜೆಯಾಗಿರುವ ಅವರು, ಮೊದಲ ಕಾಣಿಕೆಯಾಗಿ 5,01,000 ರೂಪಾಯಿ ದೇಣಿಗೆ ನೀಡಿದ್ದಾರೆ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೂ ತೀರ್ಮಾನಿಸಲಾಗಿದೆ ಎಂದರು.