Friday, 22nd November 2024

ಮಾಜಿ ಕ್ರಿಕೆಟರ್‌ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ಮಾಹಿತಿ ನೀಡಿದ್ದು, ಬಿ.ಎಸ್. ಚಂದ್ರಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಅವರು ಆರೋಗ್ಯವಾಗಿದ್ದರು. ಆಯಾಸ ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನಂತರ ಎರಡು ದಿನದಲ್ಲಿ ಮನೆಗೆ ಮರಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.