Thursday, 19th September 2024

ಇಂಗ್ಲೆಂಡ್‌ ಸರಣಿಯಿಂದಲೂ ಹೊರ ಬಿದ್ದ ಆಲ್ರೌಂಡರ್‌ ಜಡೇಜಾ

ಚೆನ್ನೈ: ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿರುವ ಟೀಂ ಇಂಡಿಯಾಕ್ಕೆ ಆಘಾತವಾಗಿದೆ.

ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಸಿಡ್ನಿ ಟೆಸ್ಟ್ ವೇಳೆ ಹೆಬ್ಬೆರಳು ಮುರಿತಕ್ಕೊಳಗಾಗಿದ್ದ ಜಡೇಜಾ ಆಸ್ಟ್ರೇಲಿಯಾದಲ್ಲಿಯೇ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಚೇತರಿಕೆಗೆ 6 ವಾರಗಳ ಸಮಯ ಬೇಕಿದೆ. ಹಾಗಾಗಿ ಇಂಗ್ಲೆಂಡ್ ವಿರುದ್ಧ ನಡೆಯುವ ಸರಣಿಯಿಂದ ಜಡೇಜಾ ಹೊರಗುಳಿಯಲಿದ್ದಾರೆ.

ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5ರಿಂದ ಟೆಸ್ಟ್ ಪಂದ್ಯ ಶುರುವಾಗಲಿದೆ. ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯ, ಐದು ಟಿ-20 ಪಂದ್ಯ, ಮೂರು ಏಕದಿನ ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ. ಉಳಿದ ಎರಡು ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆಯಲಿದೆ.

ಜಡೇಜಾ ಟಿ-20 ಹಾಗೂ ಏಕದಿನ ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ. ಟೆಸ್ಟ್ ಸರಣಿ ಬಳಿಕ ಮುಂದಿನ ನಿರ್ಧಾರ ತೆಗೆದು ಕೊಳ್ಳುವುದಾಗಿ ಬಿಸಿಸಿಐ ಹೇಳಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಜಡೇಜಾ ಹೆಸರಿರಲಿಲ್ಲ.

Leave a Reply

Your email address will not be published. Required fields are marked *