Friday, 20th September 2024

ಬಾಗ್ದಾದ್​ನಲ್ಲಿ ಆತ್ಮಾಹುತಿ ಬಾಂಬ್​ ದಾಳಿ: ಏಳು ಮಂದಿ ಸಾವು

ಬಾಗ್ದಾದ್: ಇರಾಕ್​ ರಾಜಧಾನಿ ಬಾಗ್ದಾದ್​ನಲ್ಲಿ ಸಂಭವಿಸಿದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ.

ವಾಣಿಜ್ಯ ಕೇಂದ್ರದಲ್ಲಿ ಎರಡು ಬಾರಿ ಸ್ಫೋಟವಾಗಿದ್ದು, ಆತ್ಮಾಹುತಿ​ ಬಾಂಬ್ ದಾಳಿ ಎಂದು ಮಾಧ್ಯಮ ವರದಿ ಮಾಡಿದೆ. ಈ ವರ್ಷದಲ್ಲಿ ಇರಾಕ್​ನಲ್ಲಿ ಮೊದಲ ಉಗ್ರರ ದಾಳಿ ಇದಾಗಿದೆ.

ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.