Saturday, 23rd November 2024

ಇಂತಹ ದುರಂತಗಳು ಪುನರಾವರ್ತನೆಯಾಗದಿರಲಿ: ರಾಹುಲ್ ಗಾಂಧಿ ಸಂತಾಪ

ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ ಸಂಭವಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಈ ರೀತಿಯ ದುರಂತಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್ ಲಾರಿ ಸ್ಫೋಟಗೊಂಡು ಆರಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವುದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಸಂತಾಪ ಸೂಚಿಸು ತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಚೇತರಿಸಿಕೊಳ್ಳಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಾರ್ಥಿಸಿದ್ದಾರೆ.