Friday, 20th September 2024

ಲಾರಿ-ಆಟೋ ಅಪಘಾತ: ಏಳು ಮಂದಿ ಸಾವು

ತೆಲಂಗಾಣ: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ.

ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟವರೆಲ್ಲರೂ ಕಾರ್ಮಿಕರು ಎನ್ನಲಾಗಿದೆ. ಘಟನೆಯಲ್ಲಿ ಹದಿಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದಾರೆ.

ಲಾರಿ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಅಪಘಾತವಾಗಿದೆ. 20 ಕೃಷಿ ಕಾರ್ಮಿಕರನ್ನು ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದು, ಕೆಲಸ ಮುಗಿಸಿಕೊಂಡು ದೇವರಕೊಂಡದಿಂದ ವಾಪಸ್ ಮನೆಗೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ ಎಂದು ನಲಗೊಂಡ ಎಸ್ ಪಿ ರಂಗನಾಥ್ ವಿವರಣೆ ನೀಡಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.