ನವದೆಹಲಿ : ಜೂನ್ ವೇಳೆಗೆ ನೂತನ ಚುನಾಯಿತ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದರು.
ಶುಕ್ರವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಡಬ್ಲ್ಯುಸಿ ಸಭೆಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಗಿದೆ.
ಪ್ರತಿಭಟನಾ ನಿರತ ರೈತರ ಪರವಾಗಿ ಮತ್ತು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಕ್ಕೆ ಕರೆ ನೀಡುವುದು. ಲಸಿಕೆಗಳನ್ನು ದಾಖಲೆ ಸಮಯದಲ್ಲಿ ಅಭಿವೃದ್ಧಿಪಡಿಸಿದ ವಿಜ್ಞಾನಿ ಗಳಿಗೆ ಮತ್ತು ಸಂಶೋಧಕರಿಗೆ ಧನ್ಯವಾದಗಳನ್ನು ಅರ್ಪಿಸುವುದು. ಅರ್ನಬ್ ಗೋಸ್ವಾಮಿ ವಾಟ್ಸ್ ಆಪ್ ಚಾಟ್ಸ್ ಸೋರಿಕೆ ವಿವಾದದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ‘ರಾಷ್ಟ್ರೀಯ ಭದ್ರತೆಗೆ ಧಕ್ಕೆ ಯಾಗಿದೆ’ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.
ಎಐಸಿಸಿ ನೂತನ ಅಧ್ಯಕ್ಷರ ಆಯ್ಕೆ ಕುರಿತಂತೆಯೂ ಚರ್ಚೆ ನಡೆಸಲಾಗಿದ್ದು, ಜೂನ್ 2021ರಲ್ಲಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸುವಂತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.